Champions Trophy 2025: ಫೈನಲ್ ಪ್ರವೇಶಿಸಿದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

ಭಾರತ ತಂಡದ ಸಾಧನೆಗೆ ದೇಶದ ಗಣ್ಯರು ಶುಭ ಕೋರಿದ್ದು, ಫೈನಲ್ ಪಂದ್ಯ ಕೂಡ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
Indian Cricket team
ಭಾರತ ತಂಡಕ್ಕೆ ಜಯ
Updated on

ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಗೇರಿರುವ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಮೊದಲ ಸೆಮಿಫೈನಲ್ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೂರ್ನಿಯ ಫೈನಲ್ ಗೇರಿತು. ಭಾರತ ತಂಡದ ಸಾಧನೆಗೆ ದೇಶದ ಗಣ್ಯರು ಶುಭ ಕೋರಿದ್ದು, ಫೈನಲ್ ಪಂದ್ಯ ಕೂಡ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, '#TeamIndia ನಿಂದ ಮತ್ತೊಂದು ಅದ್ಭುತ ಗೆಲುವು! ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸದ ನಿಜವಾದ ಪ್ರದರ್ಶನ. ರೋಹಿತ್ ಅವರ ಅದ್ಭುತ ನಾಯಕತ್ವದಲ್ಲಿ, ವಿರಾಟ್ ಕೊಹ್ಲಿ ತಮ್ಮ ವಿಶಿಷ್ಟ ಪ್ರತಿಭೆಯನ್ನು ಸೇರಿಸಿದ್ದಾರೆ. ಈ ಅದ್ಭುತ ಸಾಧನೆಯ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ. ವೈಭವದಿಂದ ಒಂದು ಹೆಜ್ಜೆ ದೂರದಲ್ಲಿ - ಟ್ರೋಫಿಯನ್ನು ಮನೆಗೆ ತನ್ನಿ, ಹುಡುಗರೇ ಎಂದು ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡಿದ್ದು, 'ನಮ್ಮ ಅದ್ಭುತ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಗೆಲುವಿನೊಂದಿಗೆ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್‌ಗೆ ಲಗ್ಗೆ ಇಟ್ಟಿದೆ! ಈ ಸಮಗ್ರ ಗೆಲುವಿಗಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು, ಮತ್ತು ಫೈನಲ್‌ಗೆ ನಿಮಗೆ ಶುಭ ಹಾರೈಸುತ್ತೇನೆ! ಎಂದು ಟ್ವೀಟ್ ಮಾಡಿದ್ದಾರೆ.

Indian Cricket team
'ಡುಮ್ಮ,, ಅನ್`ಫಿಟ್' ಎಂದವರಿಗೆ ರೋ'ಹಿಟ್': ಈ ಸಾಧನೆ ಮಾಡಿದ ಜಗತ್ತಿನ ಏಕೈಕ ನಾಯಕ Rohit Sharma

ಇಷ್ಟೇ ಅಲ್ಲದೆ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಂಸದ ಡಿಕೆ ಸುರೇಶ್, ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ, ಸಚಿವ ಸಂತೋಷ್ ಲಾಡ್, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಮಾಜಿ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವ ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವರು ಟ್ವೀಟ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com