
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತಕ್ಕೆ ಗೆಲ್ಲಲು 265ರನ್ ಸವಾಲಿನ ಗುರಿ ನೀಡಿದೆ.
ಇಂದು ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 39ರನ್ ಗಳಿಸಿದೆ, ನಾಯಕ ಸ್ಟೀವೆನ್ ಸ್ಮಿತ್ 73 ರನ್, ಲಾಬುಶ್ಟಾನ್29ರನ್ ಮತ್ತು ಅಲೆಕ್ಸ್ ಕ್ಯಾರಿ 61 ರನ್ ಗಳಿಸಿದರು.
ಅಂತಿಮ ಹಂತದಲ್ಲಿ ಅಲೆಕ್ಸ್ ಕ್ಯಾರಿ ಗಳಿಸಿದ ನಿರ್ಣಾಯಕ ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ 260ರ ಗಡಿ ದಾಟಿತು. ಅಂತಿಮವಾಗಿ ಆಸಿಸ್ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು.
ಭಾರತದ ಪರ ಮಹಮದ್ ಶಮಿ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯಾ 1 ವಿಕೆಟ್ ಪಡೆದರು.
Advertisement