'ಡುಮ್ಮ,, ಅನ್`ಫಿಟ್' ಎಂದವರಿಗೆ ರೋ'ಹಿಟ್': ಈ ಸಾಧನೆ ಮಾಡಿದ ಜಗತ್ತಿನ ಏಕೈಕ ನಾಯಕ Rohit Sharma

ಐಸಿಸಿಯ ಎಲ್ಲ ಟೂರ್ನಿಗಳಲ್ಲಿ ತಂಡವನ್ನು ಫೈನಲ್ ಗೆ ತಂದ ಜಗತ್ತಿನ ಮೊಟ್ಟ ಮೊದಲ ಮತ್ತು ಏಕೈಕ ನಾಯಕ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
Rohit Sharma
ರೋಹಿತ್ ಶರ್ಮಾ
Updated on

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪ್ರಬಲ ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಫೈನಲ್ ಗೇರಿದ ಬೆನ್ನಲ್ಲೇ ತಂಡದ ನಾಯಕ ರೋಹಿತ್ ಶರ್ಮಾ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಹೌದು.. ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಸೆಮಿ ಫೈನಲ್ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೂರ್ನಿಯ ಫೈನಲ್ ಗೇರಿತು. ಈ ಮೂಲಕ ಭಾರತ ತಂಡವನ್ನು ಮತ್ತೊಂದು ಐಸಿಸಿ ಟೂರ್ನಿಯ ಫೈನಲ್ ಹಂತಕ್ಕೆ ಕರೆದೊಯ್ದ ಶ್ರೇಯ ನಾಯಕ ರೋಹಿತ್ ಶರ್ಮಾ ಅವರಿಗೆ ಸಲ್ಲುತ್ತದೆ.

ಐತಿಹಾಸಿಕ ಸಾಧನೆ

ಈ ಗೆಲುವಿನ ಮೂಲಕ ರೋಹಿತ್ ಶರ್ಮಾ ಭಾರತ ತಂಡವನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಗೇರಿಸಿದ್ದು ಮಾತ್ರವಲ್ಲ.. ಐಸಿಸಿಯ ಎಲ್ಲ ಟೂರ್ನಿಗಳಲ್ಲಿ ತಂಡವನ್ನು ಫೈನಲ್ ಗೆ ತಂದ ಜಗತ್ತಿನ ಮೊಟ್ಟ ಮೊದಲ ನಾಯಕ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

Rohit Sharma
Champions Trophy 2025: ಆಸಿಸ್ ವಿರುದ್ಧ Virat Kohli ಅರ್ಧ ಶತಕ; ಚೇಸಿಂಗ್ ಮಾಸ್ಟರ್ ಅಪರೂಪದ ದಾಖಲೆ!

ನಾಲ್ಕು ಐಸಿಸಿ ಪುರುಷರ ಟೂರ್ನಿಗಳಲ್ಲಿ ಅಂದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್, ಐಸಿಸಿ ಟಿ20 ವಿಶ್ವಕಪ್, ಐಸಿಸಿ ಏಕದಿನ ವಿಶ್ವಕಪ್ ಮತ್ತು ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ ಮೊದಲ ನಾಯಕ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಈ ಹಿಂದೆ ಇದೇ ರೋಹಿತ್ ಶರ್ಮಾ 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಮತ್ತು ಅದೇ ವರ್ಷ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಫೈನಲ್ ಗೆ ತಂದಿದ್ದರು. ಬಳಿಕ 2024ರಲ್ಲಿ ಟಿ20 ವಿಶ್ವಕಪ್ ನಲ್ಲಿ ಫೈನಲ್ ಗೆ ಬಂದಿದ್ದು ಮಾತ್ರವಲ್ಲದೇ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ವಿಶ್ವಕಪ್ ಜಯಿಸಿತ್ತು. ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಭಾರತ ಫೈನಲ್ ಗೇರಿದೆ.

Rohit Sharma becomes the first ever captain to reach the final in all four Men’s ICC tournaments

  • ICC World Test Championship (2023)

  • ODI World Cup (2023)

  • T20 World Cup (2024)

  • ICC Champions Trophy (2025)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com