
ದುಬೈ: ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ನಡೆಯುತ್ತಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತಕ್ಕೆ ಉತ್ತಮ ಆರಂಭ ಪಡೆಯಿತು. ಮೂರನೇ ಓವರ್ ನಲ್ಲೇ ಕೂಪರ್ ಕಾನೋಲಿ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮೊದಲ ಆಘಾತ ನೀಡಿದರು. ಆದರೆ ನಂತರ ಟ್ರಾವಿಸ್ ಹೆಡ್ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡಕ್ಕೆ ಚೇತರಿಕೆ ತಂದುಕೊಟ್ಟರು.
33 ಎಸೆತಗಳಲ್ಲೇ 2 ಸಿಕ್ಸರ್ 5 ಬೌಂಡರಿ ಜೊತೆಗೆ 39 ರನ್ ಪೇರಿಸಿದ್ದ ಟ್ರಾವಿಸ್ ಹೆಡ್ ಅವರನ್ನು ವರುಣ್ ಚಕ್ರವರ್ತಿ ಮೊದಲ ಓವರ್ ನ ಎರಡನೇ ಎಸೆತದಲ್ಲೇ ಔಟ್ ಮಾಡಿ ಪೆವಿಲಿಯನ್ ದಾರಿ ತೋರಿಸಿದರು. ಸ್ಫೋಟಕ ಬ್ಯಾಟಿಂಗ್ ಮೂಲಕ ಸೆಟಲ್ ಆಗಿದ್ದ ಟ್ರಾವಿಸ್ ಹೆಡ್ ಔಟಾಗುತ್ತಿದ್ದಂತೆ ತಂಡದಲ್ಲಿ ಸಂಭ್ರಮ ಮನೆ ಮಾಡಿತು. ಪ್ರಸ್ತುತ 13 ಓವರ್ ಮುಕ್ತಾಯಕ್ಕೆ ಆಸ್ಟ್ರೇಲಿಯಾ 2 ವಿಕೆಟ್ ನಷ್ಟಕ್ಕೆ 72 ಪೇರಿಸಿದೆ. ಸ್ಟೀವ್ ಸ್ಮಿತ್ ಅಜೇಯ 23 ಮತ್ತು ಮಾರ್ನಸ್ ಲ್ಯಾಬುಶೇನ್ 4 ರನ್ ಬಾರಿಸಿ ಆಡುತ್ತಿದ್ದಾರೆ.
Advertisement