
ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಬುತ ಪ್ರದರ್ಶನ ಮುಂದುವರೆಸಿರುವ ಬೆಂಗಳೂರು ಮೂಲದ ನ್ಯೂಜಿಲೆಂಡ್ ಆಟಗಾರ ರಚಿನ್ ರವೀಂದ್ರ, ಇಂದು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಐದನೇ ಶತಕ ಗಳಿಸುವ ಮೂಲಕ ಶಿಖರ್ ಧವನ್ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
ರಚಿನ್ ಐಸಿಸಿ ಏಕದಿನ ಟೂರ್ನಿಗಳಲ್ಲಿ ಕೇವಲ 13 ಇನ್ನಿಂಗ್ಸ್ ಗಳಲ್ಲೇ ರಚಿನ್ ಐದನೇ ಶತಕದ ಸಾಧನೆ ಮಾಡಿದ್ದಾರೆ. ಆ ಮೂಲಕ ಐಸಿಸಿ ಟೂರ್ನಿಗಳಲ್ಲಿ ಅತಿ ವೇಗದಲ್ಲಿ ಐದು ಶತಕ ಗಳಿಸಿದ ಬ್ಯಾಟರ್ ಎನಿಸಿಕೊಂಡರು. ಅಲ್ಲದೇ ಭಾರತದ ಶಿಖರ್ ಧವನ್ ಅವರ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದರು.
ಧವನ್ 15 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದರು.ಇಂದು ಲಾಹೋರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ರಚಿನ್ 101 ಎಸೆತಗಳಲ್ಲಿ 13 ಬೌಂಡರಿ ಹಾಗೂ ಒಂದು ಸಿಕ್ಸರ್ ಗಳಿಸುವ ಮೂಲಕ 108 ರನ್ ಗಳಿಸುವ ಮೂಲಕ ವಿಶ್ವ ದಾಖಲೆ ಮಾಡಿದರು.
ವಿಶ್ವದ ಐದನೇ ಆಟಗಾರ: ಅಲ್ಲದೇ ಚಾಂಪಿಯನ್ಸ್ ಟ್ರೋಫಿಯ ಒಂದೇ ಆವೃತ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಶತಕ ಗಳಿಸಿದ ನ್ಯೂಜಿಲೆಂಡ್ ಬ್ಯಾಟರ್ ಹಾಗೂ ವಿಶ್ವದ ಐದನೇ ಆಟಗಾರ ಎಂಬ ಖ್ಯಾತಿಗೂ ಪಾತ್ರರಾದರು.
ಪಾಕಿಸ್ತಾನದ ಸಯೀದ್ ಅನ್ವರ್, ಭಾರತದ ಸೌರವ್ ಗಂಗೂಲಿ, ಶ್ರೀಲಂಕಾದ ಉಪುಲ್ ತರಂಗ ಮತ್ತು ಭಾರತದ ಶಿಖರ್ ಧವನ್ ಈ ಗುಂಪಿನಲ್ಲಿದ್ದಾರೆ.
ಇದೇ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ನಡೆದ ಎ ಗುಂಪಿನ ಪಂದ್ಯದಲ್ಲೂ ರಚಿನ್ 112 ರನ್ ಬಾರಿಸಿದ್ದರು.
Advertisement