
ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲಿನ ನಡುವೆಯೂ ದಕ್ಷಿಣ ಆಫ್ರಿಕಾದ ಬ್ಯಾಟರ್ ಡೇವಿಡ್ ಮಿಲ್ಲರ್ ಅಪರೂಪದ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.
ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೀಡಿದ್ದ 363 ರನ್‌ಗಳ ಗುರಿ ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ 9 ವಿಕೆಟ್ ನಷ್ಟಕ್ಕೆ 312 ರನ್ ಗಳನ್ನಷ್ಟೇ ಶಕ್ತವಾಯಿತು. ಆ ಮೂಲಕ 50 ರನ್ ಗಳ ಅಂತರದಲ್ಲಿ ಹೀನಾಯ ಸೋಲುಕಂಡಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ.
Champions Trophy ಇತಿಹಾಸದಲ್ಲೇ ವೇಗದ ಶತಕ
ಇನ್ನು ಈ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಕೇವಲ 67 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ ಅಜೇಯ 100 ರನ್ ಸಿಡಿಸಿದರು. ಆ ಮೂಲಕ ಮಿಲ್ಲರ್ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 6ನೇ ಶತಕ ಸಿಡಿಸಿದರು. ಅಂತೆಯೇ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೂ ಭಾಜನರಾದರು.
ಇದಕ್ಕೂ ಮೊದಲು 2002ರಲ್ಲಿ ಭಾರತದ ವೀರೇಂದ್ರ ಸೆಹ್ವಾಗ್ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾದ ಕೊಲಂಬೋ ಮೈದಾನದಲ್ಲಿ ಕೇವಲ 77 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಈ ವರೆಗೂ ಚಾಂಪಿಯನ್ಸ್ ಟ್ರೋಫಿಯಲ್ಲಿ ದಾಖಲಾಗಿದ್ದ ವೇಗದ ಶತಕವಾಗಿತ್ತು. ಇದೀಗ ಮಿಲ್ಲರ್ 67 ಎಸೆತಗಳಲ್ಲೇ ಶತಕ ಸಿಡಿಸಿಲುವ ಮೂಲಕ ಈ ದಾಖಲೆ ಮುರಿದಿದ್ದಾರೆ.
Fastest hundreds in Champions Trophy (by balls faced)
67 - David Miller (SA) vs NZ, Lahore, 2025 SF
77 - Virender Sehwag (IND) vs ENG, Colombo RPS 2002
77 - Josh Inglis (AUS) vs ENG, Lahore, 2025
80 - Shikhar Dhawan (IND) vs SA, Cardiff, 2013
87 - Tillakaratne Dilshan (SL) vs SA, Centurion, 2009
ಐಸಿಸಿ ನಾಕೌಟ್ ಗಳಲ್ಲಿ ಮಿಲ್ಲರ್ ಅಬ್ಬರ
ಅಂತೆಯೇ ಐಸಿಸಿ ಟೂರ್ನಿಗಳಲ್ಲಿ ಡೇವಿಡ್ ಮಿಲ್ಲರ್ ಅಬ್ಹರ ಮುಂದುವರೆದಿದ್ದು, ಇಂದೂ ಕೂಡ ಶತಕ ಸಿಡಿಸುವ ಮೂಲಕ ಮಿಲ್ಲರ್ ತಮ್ಮ ದಾಖಲೆ ಮುಂದುವರೆಸಿದ್ದಾರೆ. ಈ ಹಿಂದೆ 2013ರ ಚಾಂಪಿಯನ್ಸ್ ಟ್ರೋಫಿ ಸೆಮಿ ಫೈನಲ್ ಪಂದ್ಯದಲ್ಲಿ ಮಿಲ್ಲರ್ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಸಿಡಿಸಿದ್ದರು. ಬಳಿಕ 2015ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಇದೇ ನ್ಯೂಜಿಲೆಂಡ್ ವಿರುದ್ಧ ಕೇವಲ 18 ಎಸೆತಗಳಲ್ಲಿ 49ರನ್ ಸಿಡಿಸಿದ್ದರು. ಬಳಿಕ 2023ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ್ದರು.
David Miller in ICC ODI knockouts
56*(51) vs ENG, The Oval, CT 2013 SF
49(18) vs NZ, Auckland, CWC 2015 SF
101(116) vs AUS, Kolkata, CWC 2023 SF
100*(67) vs NZ, Lahore, CT 2025 SF
ಅಂತೆಯೇ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮೂರು ಶತಕಗಳು ದಾಖಲಾಗಿರುವುದು ಇದೇ ಮೊದಲು. ಇದಕ್ಕೂ ಮೊದಲು ನ್ಯೂಜಿಲೆಂಜ್ ಪರ ರಚಿನ್ ರವೀಂದ್ರ ಮತ್ತು ಕೇನ್ ವಿಲಿಯಮ್ಸನ್ ಕೂಡ ಶತಕ ಸಿಡಿಸಿದ್ದರು.
This is the first instance of three hundreds being recorded in a Champions Trophy match.
Advertisement