
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾರತದ ವಿರುದ್ಧದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆರಿಸಿಕೊಂಡಿತು.
ವಿಲ್ ಯಂಗ್ ಔಟಾದ ಬಳಿಕ ಕ್ರೀಸ್ ಗೆ ಆಗಮಿಸಿದ ಕೇನ್ ವಿಲಿಯಮ್ಸನ್ ಕಳೆದ ಪಂದ್ಯದಂತೆ ಇಲ್ಲಿಯೂ ಉತ್ತಮ ಇನ್ನಿಂಗ್ಸ್ ಕಟ್ಟುವ ಹುಮ್ಮಸ್ಸಿನಲ್ಲಿದ್ದರು. ಆದರೆ ಕೇವಲ 11 ರನ್ ಗಳಿಸಿದ್ದ ವೇಳೆ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಅವರಿಗೇ ಕ್ಯಾಚಿತ್ತು ಔಟಾದರು.
ಕಾಲಿಗೆ ಗಾಯ
ಇದಕ್ಕೂ ಮೊದಲು ವಿಲಿಯಮ್ಸನ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡಿದ್ದರು. ಅವರು ಕ್ವಾಡ್ ಸ್ಟ್ರೈನ್‌ನಿಂದ ಬಳಲುತ್ತಿದ್ದ ಕಾರಣ ನ್ಯೂಜಿಲೆಂಡ್ ಫಿಸಿಯೋ ಅವರಿಗೆ ಮೈದಾನದಲ್ಲೇ ಚಿಕಿತ್ಸೆ ನೀಡಿದ್ದರು. ಆದರೆ ವಿಲಿಯಮ್ಸನ್ 11 ರನ್ ಗಳಿಸಿ ಕುಲದೀಪ್ ಯಾದವ್ ಗೆ ವಿಕೆಟ್ ಒಪ್ಪಿಸಿದರು. ಇದೀಗ ಭಾರತದ ಬ್ಯಾಟಿಂಗ್ ಆರಂಭಿಸಿದ್ದು, ಕೇನ್ ವಿಲಿಯಮ್ಸನ್ ಬದಲಿಗೆ ಮಾರ್ಕ್ ಚಾಪ್ಮನ್ ಫೀಲ್ಡಿಂಗ್ ಮಾಡುತ್ತಿದ್ದಾರೆ.
Advertisement