Champions Trophy 2025 Final: ಇನ್ನೂ ಬ್ಯಾಟಿಂಗ್ ಗೇ ಬಂದಿಲ್ಲ, ಆಗಲೇ Virat Kohli ಅಪರೂಪದ ದಾಖಲೆ; ಸಚಿನ್ ತೆಂಡೂಲ್ಕರ್ ಇರುವ Elite India List ಸೇರ್ಪಡೆ

ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ಅಪರೂಪದ ದಾಖಲೆ ಸೇರ್ಪಡೆ ಮಾಡಿಕೊಂಡಿದ್ದಾರೆ.
Virat Kohli
ವಿರಾಟ್ ಕೊಹ್ಲಿ
Updated on

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ಇನ್ನೂ ಬ್ಯಾಟಿಂಗ್ ಗೇ ಬಂದಿಲ್ಲ.. ಆಗಲೇ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಹೌದು.. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ಅಪರೂಪದ ದಾಖಲೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಇದು ವಿರಾಟ್ ಕೊಹ್ಲಿ ಅವರ 550ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಗಿದ್ದು, ಆ ಮೂಲಕ ಈ ಸಾಧನೆ ಮಾಡಿದ 6ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ ಈ ಮೈಲುಗಲ್ಲು ಮುಟ್ಟಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ಪಂದ್ಯಗಳನ್ನಾಡಿರುವುದು ಕೇವಲ 6 ಆಟಗಾರರು ಮಾತ್ರ.

Virat Kohli
ICC Champions Trophy 2025 Final: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ, ಭರ್ಜರಿ ಆರಂಭದ ಹೊರತಾಗಿಯೂ ಸ್ಯಾಂಥ್ನರ್ ಪಡೆಗೆ ಆಘಾತ

ಸಚಿನ್ ಇರುವ ಎಲೈಟ್ ಗ್ರೂಪ್ ಸೇರ್ಪಡೆ

ಇನ್ನು ಇದೇ ವೇಳೆ ಕೊಹ್ಲಿ ಭಾರತದ ಮಾಜಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ಜಯವರ್ಧನೆ, ಸಂಗಕ್ಕಾರ ಇರುವ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550+ ಪಂದ್ಯಗಳನ್ನಾಡಿದ ಆಟಗಾರರೆಂದರೆ ಸಚಿನ್ ತೆಂಡೂಲ್ಕರ್ (ಭಾರತ), ಮಹೇಲ ಜಯವರ್ಧನೆ (ಶ್ರೀಲಂಕಾ), ಕುಮಾರ ಸಂಗಾಕ್ಕರ (ಶ್ರೀಲಂಕಾ), ಸನತ್ ಜಯಸೂರ್ಯ (ಶ್ರೀಲಂಕಾ) ಹಾಗೂ ರಿಕಿ ಪಾಟಿಂಗ್ (ಆಸ್ಟ್ರೇಲಿಯಾ). ಇದೀಗ ಈ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.

ಕೊಹ್ಲಿ ಟೀಮ್ ಇಂಡಿಯಾ ಪರ ಈವರೆಗೆ 550* ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 27598* ರನ್ ಕಲೆಹಾಕಿದ್ದಾರೆ. ಈ ವೇಳೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ 82 ಶತಕಗಳು ಮೂಡಿಬಂದಿವೆ. ಹಾಗೆಯೇ 9 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇದರ ಜೊತೆ 336 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಿಂದ 2013ರ ನಡುವೆ ಸಚಿನ್ ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 100 ಶತಕಗಳೊಂದಿಗೆ 34357 ರನ್​ ಕಲೆಹಾಕಿದ್ದಲ್ಲದೆ, 201 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

Virat Kohli
Champions Trophy 2025 Final: ಸೋಲು, ಸೋಲು, ಸೋಲು.. ನನಗಿದು ಬೇಕಾ? Rohit Sharma ಮತ್ತೊಂದು ಕಳಪೆ ದಾಖಲೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com