CT2025: ವಿಕೆಟ್ ಹಿಡಿದು ಮೈದಾನದಲ್ಲೇ ದಾಂಡಿಯಾ ಡ್ಯಾನ್ಸ್ ಮಾಡಿ ಸಂಭ್ರಮಿಸಿದ RO-KO; Video!
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಕಿವೀಸ್ ಬಳಗ ಮೊದಲು ಬ್ಯಾಟಿಂಗ್ ಮಾಡಿತು. ನ್ಯೂಜಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿತು. ಈ ಗುರಿಯನ್ನು ಭಾರತ ಇನ್ನು 6 ಎಸೆತಗಳು ಬಾಕಿ ಇರುವಂತೆ 254 ರನ್ ಬಾರಿ ಗೆಲುವು ಸಾಧಿಸಿತು.
ಪಂದ್ಯದ ಗೆಲುವಿನ ಬಳಿಕ ಭಾರತ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಕೆಟ್ ಹಿಡಿದು ದಾಂಡಿಯಾ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅದ್ಭುತ ಬ್ಯಾಟಿಂಗ್ ಮಾಡಿದ್ದು 76 ರನ್ ಬಾರಿಸಿದ್ದರೆ ವಿರಾಟ್ ಕೊಹ್ಲಿ 1 ರನ್ ಗೆ ಔಟಾಗಿ ನಿರಾಸೆ ಮೂಡಿಸಿದರು. ಆದರೆ ಅಂತಿಮವಾಗಿ ಭಾರತ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ