
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಯ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ನಿನ್ನೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿ 2ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಗೆ ಮುತ್ತಿಟ್ಟಿತು. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ, 83 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 76 ರನ್ ಕಲೆ ಹಾಕಿದರು.
ನಿಧಾನಗತಿಯ ಪಿಚ್ ನಲ್ಲಿ ಭಾರತದ ದಿಢೀರ್ ಕುಸಿತವನ್ನು ತಡೆಯಲು ಸಮಯೋಚಿತ ಬ್ಯಾಟಿಂಗ್ ನಿರ್ವಹಿಸಿ ತಂಡಕ್ಕೆ ನೆರವಾದ ಕಾರಣಕ್ಕೆ ರೋಹಿತ್ ಶರ್ಮಾ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ಅಪರೂಪದ ದಾಖಲೆ, ಎಲೈಟ್ ಗ್ರೂಪ್ ಸೇರ್ಪಡೆ
ಇನ್ನು ಪಂದ್ಯಶ್ರೇಷ್ಠ ಪ್ರಶಸ್ತಿ ಮೂಲಕ ರೋಹಿತ್ ಶರ್ಮಾ ತಮ್ಮ ಹೆಸರಿಗೆ ಅಪರೂಪದ ದಾಖಲೆ ಬರೆದುಕೊಂಡಿದ್ದು, ಐಸಿಸಿಯ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಭಾಜನರಾದ 4ನೇ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಈ ಹಿಂದೆ 1975ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಕ್ಲೈವ್ ಲಾಯ್ಡ್, 2003 ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಆಸ್ಟ್ರೇಲಿಯಾದ ರಿಕ್ಕಿ ಪಾಂಟಿಂಗ್, 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಂದಿನ ಭಾರತ ತಂಡದ ನಾಯಕ ಎಂಎಸ್ ಧೋನಿ ಮಾತ್ರ ಫೈನಲ್ ನಲ್ಲಿ ಪಂದ್ಯಶ್ರೇಷ್ಛ ಪ್ರಶಸ್ತಿಗೆ ಭಙಾಜನರಾಗಿದ್ದರು. ಇದೀಗ ಈ ಪಟ್ಟಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
Captains with POTM award in Men’s ICC tournament finals
Clive Lloyd (West Indies, CWC 1975)
Ricky Ponting (Australia, CWC 2003)
MS Dhoni (India, CWC 2011)
Rohit Sharma (India, CT 2025)
14 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ
ಇನ್ನು ಐಸಿಸಿ ಟೂರ್ನಿಯ ಫೈನಲ್ ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ 14 ವರ್ಷಗಳ ಹಿಂದಿನ ಎಂಎಸ್ ಧೋನಿ ದಾಖಲೆಯನ್ನು ಸರಿಗಟ್ಟಿದ್ದಾರೆ. 2011ರಲ್ಲಿ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕ ಎಂಎಸ್ ಧೋನಿ ಅಜೇಯ 91 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಹೀಗಾಗಿ ಅಂದು ಧೋನಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.
Advertisement