ಚಾಂಪಿಯನ್ಸ್ ಟ್ರೋಫಿ ಪ್ರದಾನ ಸಮಾರಂಭದಲ್ಲಿ PCB ಗೈರು; ವಿವಾದ!

ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಂದ್ಯಾವಳಿಯ ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಸಿಬಿ ಅಧಿಕಾರಿಗಳ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ.
 ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ
ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ
Updated on

ಕರಾಚಿ: ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟ್ರೋಫಿ ಎತ್ತಿಹಿಡಿದು ಇತಿಹಾಸ ಬರೆದಿದೆ.

ಈ ಮಧ್ಯೆ ಚಾಂಪಿಯನ್ಸ್ ಟ್ರೋಫಿ ಪ್ರದಾನ ಸಮಾರಂಭಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಅಧಿಕಾರಿಯನ್ನು ವೇದಿಕೆಗೆ ಆಹ್ವಾನಿಸಲು ಐಸಿಸಿ ವಿಫಲವಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಪಿಸಿಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಂದ್ಯಾವಳಿಯ ನಿರ್ದೇಶಕ ಸುಮೈರ್ ಅಹ್ಮದ್ ಸ್ಥಳದಲ್ಲಿದ್ದರೂ ಅವರನ್ನು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲಾಗಿಲ್ಲ ಎಂದು ಮೂಲವೊಂದು ತಿಳಿಸಿದೆ.

"ಪೂರ್ವ ನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಫೆಡರಲ್ ಆಂತರಿಕ ಸಚಿವರಾಗಿರುವ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ದುಬೈಗೆ ಹೋಗಿರಲಿಲ್ಲ. ಆದರೆ ಫೈನಲ್ ಪಂದ್ಯ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಲು ಪಿಸಿಬಿ ಸಿಇಒ ಅವರನ್ನು ಕಳುಹಿಸಲಾಗಿತ್ತು" ಎಂದು ಮೂಲಗಳು ತಿಳಿಸಿವೆ.

ಕೆಲವು ಕಾರಣ ಅಥವಾ ತಪ್ಪು ತಿಳುವಳಿಕೆಯಿಂದಾಗಿ, ಪಿಸಿಬಿ ಅಧಿಕಾರಿಯನ್ನು ವೇದಿಕೆಗೆ ಕರೆಯಲಾಗಿಲ್ಲ ಎಂದು ಅವರು ಹೇಳಿದ್ದಾರೆ.

 ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ
Champions Trophy 2025: ನಿವೃತ್ತಿ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ, ವದಂತಿಗಳಿಗೆ ತೆರೆ!

ಐಸಿಸಿ ಅಧ್ಯಕ್ಷ ಜಯ್ ಶಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಕ್ರಿಕೆಟ್ ಆಟಗಾರರಿಗೆ ಪದಕಗಳು, ಟ್ರೋಫಿಗಳು ಮತ್ತು ಜಾಕೆಟ್‌ಗಳನ್ನು ವಿತರಿಸಿದರು.

ಅಂತಿಮ ಸಮಾರಂಭವನ್ನು ಆಯೋಜಿಸುವ ಜವಾಬ್ದಾರಿ ಹೊಂದಿರುವ ಐಸಿಸಿಗೆ, ಪಿಸಿಬಿ ಸಿಇಒ ಜತೆ ಸರಿಯಾಗಿ ಸಂವಹನ ನಡೆಸಲು ಸಾಧ್ಯವಾಗದಿರಬಹುದು. ಹೀಗಾಗಿ ಅವರನ್ನು ಹೊರಗಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತನ್ನ ಸಿಇಒ ಅವರನ್ನು ವೇದಿಕೆಗೆ ಏಕೆ ಆಹ್ವಾನಿಸಲಿಲ್ಲ ಎಂಬುದರ ಕುರಿತು ಪಿಸಿಬಿ ಐಸಿಸಿಯೊಂದಿಗೆ ಚರ್ಚಿಸುವ ನಿರೀಕ್ಷೆಯಿದೆ.

ಏತನ್ಮಧ್ಯೆ, ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಂದ್ಯಾವಳಿಯ ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಸಿಬಿ ಅಧಿಕಾರಿಗಳ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ.

"ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ. ಆದರೆ “ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಒಬ್ಬೇ ಒಬ್ಬ ಪಿಸಿಬಿ ಅಧಿಕಾರಿ ಇರಲಿಲ್ಲ. ಅದೊಂದು ವಿಶ್ವಮಟ್ಟದ ಕಾರ್ಯಕ್ರಮ. ಅಲ್ಲಿ ಪಿಸಿಬಿ ಅಧಿಕಾರಿಗಳು ಇರಬೇಕಿತ್ತು. ಆದರೂ ಅವರು ಅಲ್ಲಿ ಇರದೇ ಇದ್ದಿದ್ದು ಯಾಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಪಿಸಿಬಿ ಇದಕ್ಕೆ ಸಮಜಾಯಿಷಿ ನೀಡಬೇಕು’’ ಎಂದು ಅಖ್ತರ್ ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com