Champions Trophy 2025: ನಿವೃತ್ತಿ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ, ವದಂತಿಗಳಿಗೆ ತೆರೆ!

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರೋಹಿತ್ ಶರ್ಮಾ ಐಸಿಸಿ ಈವೆಂಟ್ ಫೈನಲ್‌ನಲ್ಲಿ ತಮ್ಮ ಮೊದಲ ಅರ್ಧಶತಕವನ್ನು ದಾಖಲಿಸಿದರು.
ರೋಹಿತ್ ಶರ್ಮಾ
ರೋಹಿತ್ ಶರ್ಮಾ
Updated on

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ. ಇದೀಗ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕು ಮುನ್ನಾದಿನ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಭಾರಿ ಚರ್ಚೆ ನಡೆದಿತ್ತು.

ಇನ್ನೆರಡು ತಿಂಗಳ ನಂತರ ರೋಹಿತ್ ಶರ್ಮಾ ಅವರಿಗೆ 38 ವರ್ಷ ವಯಸ್ಸಾಗಲಿದೆ ಮತ್ತು ಭಾರತದ ಮುಂದಿನ ಪ್ರಮುಖ ಏಕದಿನ ಪಂದ್ಯಾವಳಿ 2027ರ ಏಕದಿನ ವಿಶ್ವಕಪ್ ಆಗಿರುವುದರಿಂದ, ರೋಹಿತ್ ನಿವೃತ್ತಿ ಘೋಷಿಸಬಹುದು ಎಂಬ ವದಂತಿಗಳು ಹಬ್ಬಿದ್ದವು. ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ.

'ನಾನು ಈ ಸ್ವರೂಪದಿಂದ ನಿವೃತ್ತಿ ಹೊಂದುವುದಿಲ್ಲ. ಮುಂದೆ ಯಾವುದೇ ವದಂತಿಗಳನ್ನು ದಯವಿಟ್ಟು ಹರಡಬೇಡಿ. ಭವಿಷ್ಯದ ಬಗ್ಗೆ ಯಾವುದೇ ಯೋಜನೆ ಇಲ್ಲ, ಏನು ನಡೆಯುತ್ತಿದೆಯೋ ಅದು ಹಾಗೆಯೇ ಮುಂದುವರಿಯುತ್ತದೆ' ಎಂದು ರೋಹಿತ್ ಹೇಳಿದರು.

'ಸಾಕಷ್ಟು ಕ್ರಿಕೆಟ್ ಆಡಿರುವ ಹುಡುಗರಲ್ಲಿಯೂ ಸಹ ಬಹಳಷ್ಟು ಹಸಿವು ಇರುತ್ತದೆ ಮತ್ತು ಅದು ಕಿರಿಯ ಆಟಗಾರರ ಮೇಲೂ ಪರಿಣಾಮ ಬೀರುತ್ತದೆ. ನಮ್ಮಲ್ಲಿ ಐದರಿಂದ ಆರು ಆಟಗಾರರು ನಿಜವಾದ ದಿಗ್ಗಜರು. ಇದು ನಮ್ಮೆಲ್ಲರಿಗೂ ಕೆಲಸವನ್ನು ಸುಲಭಗೊಳಿಸುತ್ತದೆ' ಎಂದರು.

ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರೋಹಿತ್ ಶರ್ಮಾ ಐಸಿಸಿ ಈವೆಂಟ್ ಫೈನಲ್‌ನಲ್ಲಿ ತಮ್ಮ ಮೊದಲ ಅರ್ಧಶತಕವನ್ನು ದಾಖಲಿಸಿದರು.

ರೋಹಿತ್ ಶರ್ಮಾ
ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ಸಂಭ್ರಮ

ನ್ಯೂಜಿಲೆಂಡ್ ನೀಡಿದ್ದ 252 ರನ್ ಗುರಿಯನ್ನು ಬೆನ್ನಟ್ಟಿದ್ದ ಭಾರತದ ನಾಯಕ ರೋಹಿತ್, ಮೊದಲ ಎಸೆತದಿಂದಲೇ ಕಿವೀಸ್ ಬೌಲರ್‌ಗಳನ್ನು ತರಾಟೆಗೆ ತೆಗೆದುಕೊಂಡರು. 83 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಮೂರು ಸಿಕ್ಸರ್ ನೆರವಿನೊಂದಿಗೆ 76 ರನ್ ಗಳಿಸಿ ಭಾರತಕ್ಕೆ ಉತ್ತಮ ಆರಂಭ ನೀಡಿದರು.

ರೋಹಿತ್ ಶರ್ಮಾ ಒಂಬತ್ತು ಐಸಿಸಿ ಈವೆಂಟ್‌ಗಳ ಫೈನಲ್‌ ಪಂದ್ಯಗಳನ್ನು ಆಡಿದ್ದಾರೆ. 11 ಇನಿಂಗ್ಸ್‌ಗಳಲ್ಲಿ 32.20 ಸರಾಸರಿಯಲ್ಲಿ 322 ರನ್ ಗಳಿಸಿದ್ದಾರೆ.

ಇದೀಗ ರೋಹಿತ್ ಶರ್ಮಾ, ಸೌರವ್ ಗಂಗೂಲಿ (2000ರ ಐಸಿಸಿ ನಾಕೌಟ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 117), ಸನತ್ ಜಯಸೂರ್ಯ (ಐಸಿಸಿ ಚಾಂಪಿಯನ್ಸ್ ಟ್ರೋಫಿ 2002ರ ಫೈನಲ್‌ನಲ್ಲಿ ಭಾರತದ ವಿರುದ್ಧ 74) ಮತ್ತು ದಕ್ಷಿಣ ಆಫ್ರಿಕಾದ ಹ್ಯಾನ್ಸಿ ಕ್ರೋಂಜೆ (ಐಸಿಸಿ ನಾಕೌಟ್ 1998ರ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 61*) ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ 5+ ಸ್ಕೋರ್‌ಗಳನ್ನು ಗಳಿಸಿದ ನಾಯಕರ ಸಾಲಿಗೆ ಸೇರಿದ್ದಾರೆ.

76 ಯಾವುದೇ ಏಕದಿನ ಫೈನಲ್‌ನಲ್ಲಿ ರೋಹಿತ್ ಶರ್ಮಾ ಅವರ ಅತ್ಯಧಿಕ ಸ್ಕೋರ್ ಆಗಿದ್ದು, 2008ರ ಕಾಮನ್‌ವೆಲ್ತ್ ಬ್ಯಾಂಕ್ ಸರಣಿ ಫೈನಲ್‌ನಲ್ಲಿ ಎಸ್‌ಸಿಜಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 66 ರನ್ ಗಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com