ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ! ಬೇಬಿ ಬಂಪ್ ಫೋಟೋಶೂಟ್! Video
ಮುಂಬೈ: ಚಾಂಪಿಯನ್ಸ್ ಟ್ರೋಫಿ ಗೆದ್ದ ಸಂಭ್ರಮದಲ್ಲಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್-ಅಥಿಯಾ ಶೆಟ್ಟಿ ಮತ್ತೊಂದು ಸಂಭ್ರಮಾಚರಣೆಗೆ ಸಜ್ಜಾಗುತ್ತಿದ್ದಾರೆ. ಹೌದು. ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಅಥಿಯಾ ಶೆಟ್ಟಿ ಶೀಘ್ರವೇ ತಾಯಿಯಾಗಿ ಬಡ್ತಿ ಪಡೆಯಲಿದ್ದಾರೆ.
ಕೆ.ಎಲ್. ರಾಹುಲ್ , ಅಥಿಯಾ ಶೆಟ್ಟಿ ದಂಪತಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಈ ವಿಷಯ ತಿಳಿಸಿದ್ದಾರೆ. ಈ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.
ಈ ಫೋಟೋದಲ್ಲಿ ದಂಪತಿಗಳು ಅತ್ಯಂತ ಆತ್ಮೀಯ ಹಾಗೂ ಸಂತೋಷದಲ್ಲಿ ಇರುವುದು ಕಂಡುಬಂದಿದೆ. ಕೆ. ಎಲ್. ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಅವರ ಹೊಟ್ಟೆಯನ್ನು ತಬ್ಬಿಕೊಂಡು ಸೋಫಾದ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಹಾಗೂ ಅವರ ಮಡಿಲಲ್ಲಿ ಮಲಗಿರುವ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.
ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಮಾಧ್ಯಮಗಳು ದಂಪತಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಸರಳತೆಗೆ ಹೆಸರಾದ ಈ ತಾರಾ ದಂಪತಿ, 2023ರಲ್ಲಿ ದಾಂಪತ್ಯ ಜೀವನ ಆರಂಭಿಸಿದ್ದರು.
