
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್‌ಗೆ ಫಾಫ್ ಡು ಪ್ಲೆಸಿಸ್ ಅವರನ್ನು ಉಪನಾಯಕನನ್ನಾಗಿ ನೇಮಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ಮಧ್ಯಾಹ್ನ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿ ಮಾಹಿತಿ ನೀಡಿದೆ. ಅಕ್ಷರ್ ಪಟೇಲ್ ಅವರನ್ನು ತಮ್ಮ ನಾಯಕನನ್ನಾಗಿ ನೇಮಿಸಿದ ಕೆಲವು ದಿನಗಳ ನಂತರ, ಕ್ಯಾಪಿಟಲ್ಸ್ ಡು ಪ್ಲೆಸಿಸ್ ಅವರನ್ನು ಉಪನಾಯಕನನ್ನಾಗಿ ಘೋಷಿಸಿದೆ.
ಫಾಫ್ ಡು ಪ್ಲೆಸಿಸ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರಿನಂತಹ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಅವರ ಸಾಮರ್ಥ್ಯ ಮತ್ತು ಅನುಭವವನ್ನು ಪರಿಗಣಿಸಿ, ಮುಂಬರುವ ಋತುವಿನಲ್ಲಿ ಪ್ರೋಟಿಯಸ್ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಹೇಳಿದೆ.
ಅಂದಹಾಗೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು. ಆದಾಗ್ಯೂ ಆರ್‌ಸಿಬಿ ಡು ಪ್ಲೆಸಿಸ್ ಅವರನ್ನು ಮೆಗಾ ಹರಾಜು ಪೂಲ್‌ಗೆ ಬಿಡುಗಡೆ ಮಾಡಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಕಳೆದ ವರ್ಷದ ಹರಾಜಿನಲ್ಲಿ ಮಾಜಿ ಆರ್‌ಸಿಬಿ ನಾಯಕನನ್ನು 2 ಕೋಟಿ ರೂ.ಗಳಿಗೆ ಖರೀದಿಸಿತ್ತು. ಹಾಲಿ ಐಪಿಎಲ್ ಟೂರ್ನಿಯಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ ಫಾಫ್ ಡು ಪ್ಲೆಸಿಸ್ ಈ ವರೆಗೂ 145 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ, 138 ಇನ್ನಿಂಗ್ಸ್‌ಗಳಲ್ಲಿ 35.99 ಸರಾಸರಿ ಮತ್ತು 136.37 ಸ್ಟ್ರೈಕ್ ರೇಟ್‌ನಲ್ಲಿ 4,571 ರನ್ ಗಳಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ
ಅಭಿಷೇಕ್ ಪೊರೆಲ್, ಫಾಫ್ ಡು ಪ್ಲೆಸಿಸ್ (ಉಪ ನಾಯಕ), ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕರುಣ್ ನಾಯರ್, ಕೆಎಲ್ ರಾಹುಲ್, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ಅಶುತೋಷ್ ಶರ್ಮಾ, ಮಾಧವ್ ತಿವಾರಿ, ದುಷ್ಮಂತ ಚಮೀರ, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಟಿ ನಟರಾಜನ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ತ್ರಿಪುರಾನ ವಿಜಯ್
Advertisement