
ಕೊಲ್ಕತ್ತಾ: ಭಾರತದ ಕ್ರಿಕೆಟ್ ಕಾಶಿ ಎಂದೇ ಹೆಸರಾದ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಏಪ್ರಿಲ್ 6 ರಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ (kkr) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವಿನ ಐಪಿಎಲ್ ಪಂದ್ಯವನ್ನು ಸ್ಥಳಾಂತರಿಸಲಾಗಿದೆ. ಈ ಪಂದ್ಯವನ್ನು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಅಂದು ರಾಮನವವಿ ಹಬ್ಬ ಇರುವುದರಿಂದ ಎದುರಾಗುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೇರೆಡೆಗೆ ಐಪಿಎಲ್ ಪಂದ್ಯವನ್ನು ಸ್ಥಳಾಂತರ ಮಾಡುವಂತೆ ಕೊಲ್ಕತ್ತಾ ಪೊಲೀಸರು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ (CAB)ಗೆ ಮನವಿ ಮಾಡಿದ್ದರು. ಇದರಿಂದ ನಗರಾದಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಬಹುದಾಗಿದೆ ಎಂದು ಹೇಳಲಾಗಿತ್ತು.
ತದನಂತರ ಏಪ್ರಿಲ್ 6 ರಂದು ನಡೆಯಬೇಕಿದ್ದ ಕೊಲ್ಕತ್ತಾ ಮತ್ತು ಲಕ್ನೋ ನಡುವಿನ ಪಂದ್ಯವನ್ನು ಗುವಾಹಟಿಗೆ ಸ್ಥಳಾಂತರಿಸಲಾಗಿದೆ.
ಕೋಲ್ಕತ್ತಾದಲ್ಲಿ ಐಪಿಎಲ್ ಪಂದ್ಯಗಳು ಹೀಗೆ ಬೇರೆಡೆಗೆ ಸ್ಥಳಾಂತರವಾಗಿರುವುದು ಇದೇ ಮೊದಲೇನಲ್ಲಾ. ಈ ಹಿಂದೆಯೂ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಇದು ಸಾಂಸ್ಕೃತಿಕ ಹಾಗೂ ಪ್ರಮುಖ ಕ್ರೀಡಾಕೂಟದ ನಡುವೆ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಭದ್ರತೆಯ ಸವಾಲನ್ನು ತೋರಿಸುತ್ತದೆ.
Advertisement