
ಐಪಿಎಲ್ 2025 ಟೂರ್ನಿ ಇಂದಿನಿಂದ ಆರಂಭಗೊಂಡಿದ್ದು ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಮಾಡಿದೆ. ಕೋಲ್ಕತ್ತಾದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಹಾಲಿ ಚಾಂಪಿಯನ್ಸ್ ಕೆಕೆಆರ್ ತಂಡವನ್ನು ಎದುರಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ಪೇರಿಸಿತು.
175 ರನ್ ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆರ್ ಸಿಬಿ ತಂಡದ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ ಹಾಗೂ ಪಿಲ್ ಸಾಲ್ಟ್ ಜೋಡಿ 95 ರನ್ ಗಳ ಜೊತೆಯಾಟದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.
31 ಎಸೆತಗಳಲ್ಲಿ 56 ರನ್ ಗಳಿಸಿ ಫಿಲಿಪ್ ಸಾಲ್ಟ್ ಔಟ್ ಆದರೆ, ದೇವದತ್ ಪಡಿಕ್ಕಲ್ 10 ಎಸೆತಗಳಲ್ಲಿ 10 ರನ್ ಗಳಿಸಿದರು. ವಿರಾಟ್ ಕೊಹ್ಲಿ 59 ರನ್ ಗಳಿಸಿ ಅರ್ಧ ಶತಕ ದಾಖಲಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಜತ್ ಪಾಟೀದಾರ್ 14 ಎಸೆತಗಳಲ್ಲಿ 30 ರನ್ ಗಳಿಸಿದರು.
ಅಂತಿಮವಾಗಿ ಕೊಹ್ಲಿ ಹಾಗೂ ಲಿವಿಂಗ್ಸ್ಟನ್ ಅಬ್ಬರದ ಬ್ಯಾಟಿಂಗ್ ಮೂಲಕ ಆರ್ ಸಿಬಿ ತಂಡ 3 ವಿಕೆಟ್ ಗಳ ನಷ್ಟಕ್ಕೆ 177 ರನ್ ಗಳಿಸಿ ಕೆಕೆಆರ್ ವಿರುದ್ಧ 7 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ಶುಭಾರಂಭ ಮಾಡಿದೆ.
ಆರ್ ಸಿ ಬಿ ಪರ ಕೃನಾಲ್ ಪಾಂಡ್ಯ 3 ವಿಕೆಟ್ ಪಡೆದರೆ, ಜೋಶ್ ಹೇಸಲ್ವುಡ್ 2 ವಿಕೆಟ್ ಪಡೆದರು. ಉಳಿದಂತೆ ಯಶ್ ದಯಾಳ್ ರಸಿಕ್ ಸಲಾಮ್, ಸುಯೇಶ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.
ಆರ್ ಸಿಬಿ ಪರ ಕೊಹ್ಲಿ, ಪಿಲ್ ಸಾಲ್ಟ್ ರನ್ ಗಳಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
Advertisement