
ಶನಿವಾರ (ಮಾ. 22) ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಏಳು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆರ್‌ಸಿಬಿ ಪರ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಕೃನಾಲ್ ಅವರ ಸಹೋದರ ಹಾರ್ದಿಕ್ ಪಾಂಡ್ಯ ತಮ್ಮ ಸಹೋದರನ ಬೌಲಿಂಗ್ ಅನ್ನು ಶ್ಲಾಘಿಸಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಆರ್‌ಸಿಬಿ ಪರ ಮಾಡಿದ ಬೌಲರ್‌ಗಳಲ್ಲಿ ಕೃನಾಲ್ ನಾಲ್ಕು ಓವರ್‌ಗಳ ಪೂರ್ಣ ಕೋಟಾದಲ್ಲಿ ಕೇವಲ 29 ರನ್ ನೀಡಿ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆಯುವ ಮೂಲಕ ಎದುರಾಳಿ ತಂಡದನ್ ರನ್ ಓಟಕ್ಕೆ ಕಡಿವಾಣ ಹಾಕಿದರು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್ ಮತ್ತು ರಿಂಕು ಸಿಂಗ್ ಅವರ ವಿಕೆಟ್‌ಗಳನ್ನು ಕಬಳಿಸಿದರು. ಅವರ ಅದ್ಭುತ ಸ್ಪೆಲ್‌ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಪಡೆದರು.
ತಮ್ಮ ಸಹೋದರನ ಅದ್ಭುತ ಪ್ರದರ್ಶನಕ್ಕೆ ಪ್ರತಿಕ್ರಿಯಿಸಿರುವ ಹಾರ್ದಿಕ್, ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಫೋಟೊ ಹಂಚಿಕೊಂಡಿದ್ದು, 'ಯೂ ಬ್ಯೂಟಿ ಮೈ ಬ್ರೋ' ಎಂದು ಬರೆದಿದ್ದಾರೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ರನ್‌ಗಳಿಗೆ ಕಟ್ಟಿಹಾಕಿತು. ಈ ನಿಟ್ಟಿನಲ್ಲಿ ಕೃನಾಲ್ ಪಾಂಡ್ಯ ಅವರ ಸ್ಪೆಲ್ಲ ತಂಡಕ್ಕೆ ಸಹಾಯ ಮಾಡಿತು. ಬಳಿಕ 175 ರನ್ ಗುರಿ ಬೆನ್ನತ್ತಿದ ಆರ್‌ಸಿಬಿ 16.2 ಓವರ್‌ಗಳಲ್ಲಿಯೇ ಏಳು ವಿಕೆಟ್‌ಗಳ ಅದ್ಭುತ ಗೆಲುವು ಸಾಧಿಸಿತು. ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಕ್ರಮವಾಗಿ 5* ಮತ್ತು 56 ರನ್‌ಗಳೊಂದಿಗೆ ಈ ಆವೃತ್ತಿಯ ತಮ್ಮ ಮೊದಲ ಅರ್ಧಶತಕಗಳನ್ನು ಗಳಿಸಿದರು.
ಐಪಿಎಲ್ 2025ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಆವೃತ್ತಿಯಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ, ಒಂದು ಪಂದ್ಯದಿಂದ ಅವರನ್ನು ನಿಷೇಧಿಸಲಾಗಿದೆ. ಹೀಗಾಗಿ, ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ತಂಡದ ಆರಂಭಿಕ ಪಂದ್ಯದಿಂದ ಅವರು ಹೊರಗುಳಿಯಲಿದ್ದಾರೆ.
Advertisement