IPL 2025: ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ Ishan Kishan ತಿರುಗೇಟು; ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ!

ಸನ್ ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಿರ್ವಹಿಸಿದ ಇಶಾನ್ ಕಿಶನ್ ಕೇವಲ 47 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 106 ರನ್ ಪೇರಿಸಿದರು.
Ishan Kishan Scripts History
ಇಶಾನ್ ಕಿಶನ್ ಶತಕ
Updated on

ಹೈದರಾಬಾದ್: ಐಪಿಎಲ್ 2025 ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್ ಇಶಾನ್ ಕಿಶನ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಹೌದು.. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಿರ್ವಹಿಸಿದ ಇಶಾನ್ ಕಿಶನ್ ಕೇವಲ 47 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 106 ರನ್ ಪೇರಿಸಿದರು.

ಈ ಮೂಲಕ ಇಶಾನ್ ಕಿಶನ್ ಐಪಿಎಲ್ 2025 ರ ತಮ್ಮ ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಗಳಿಸಿದ್ದಾರೆ. ಐಪಿಎಲ್ 2025 ರ ಮೊದಲ ಹಾಗೂ ಅವರ ಐಪಿಎಲ್ ವೃತ್ತಿಜೀವನದ ಮೊದಲ ಶತಕವನ್ನು ಪೂರ್ಣಗೊಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದ ಕಿಶನ್ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 106 ರನ್ ಕಲೆಹಾಕಿದರು.

Ishan Kishan Scripts History
IPL 2025: ಹೈದರಾಬಾದ್ ಸ್ಫೋಟಕ ಬ್ಯಾಟಿಂಗ್, ರಾಜಸ್ತಾನಕ್ಕೆ ಗೆಲ್ಲಲು ಬೃಹತ್ ಗುರಿ

ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ

ಅಂತೆಯೇ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೂ ಇಶಾನ್ ಕಿಶನ್ ಪಾತ್ರರಾಗಿದ್ದಾರೆ. ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಶತಕಗಳು ಬಂದಿತ್ತಾದರೂ ಅವೆಲ್ಲವೂ ವಿದೇಶಿ ಆಟಗಾರರದ್ದಾಗಿತ್ತು. ಇದೀಗ ಇಶಾನ್ ಕಿಶನ್ ಶತಕ ಸಿಡಿಸಿ ಆ ದಾಖಲೆಯ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ.

ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ ತಿರುಗೇಟು

ಇನ್ನು ಕಳೆದ ಒಂದು ವರ್ಷದಿಂದ ಟೀಂ ಇಂಡಿಯಾದಿಂದ ಇಶಾನ್ ಕಿಶನ್ ದೂರವಿದ್ದರು. ಅಲ್ಲದೆ ಬಿಸಿಸಿಐ ಇಶಾನ್ ಕಿಶನ್ ರ ಸೆಂಟ್ರಲ್ ಕಾಂಟ್ರಾಕ್ಟ್ ನವೀಕರಿಸಿರಲಿಲ್ಲ. ಹೀಗಾಗಿ ಇಶಾನ್ ಕಿಶನ್ ಅಕ್ಷರಶಃ ತಂಡದಿಂದ ದೂರ ಉಳಿದಿದ್ದರು. ದೇಶೀಯ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಇಶಾನ್ ಕಿಶನ್ ರ ಸೆಂಟ್ರಲ್ ಕಾಂಟ್ರಾಕ್ಟ್ ಅನ್ನು ಬಿಸಿಸಿಐ ನವೀಕರಿಸಿರಲಿಲ್ಲ. ಆದರೆ ಬಳಿಕ ದೇಶೀಯ ಟೂರ್ನಿಗಳಲ್ಲಿ ಪಾಲ್ಗೊಂಡು ಇಶಾನ್ ಕಿಶನ್ ತಮ್ಮ ಸಾಮರ್ಥ್ಯ ತೋರಿದ್ದರು. ಇದೀಗ ಐಪಿಎಲ್ ನಲ್ಲಿ ಶತಕ ಸಿಡಿಸಿ ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ಭರ್ಜರಿ ಸಂದೇಶ ರವಾನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com