
ವಿಶಾಖಪಟ್ಟಣಂ: ವಿಶಾಖಪಟ್ಟಣಂ ನಲ್ಲಿ ನಡೆದ ಐಪಿಎಲ್ 2025 4ನೇ ಪಂದ್ಯದಲ್ಲಿ ಅಂತಿಮ ಕ್ಷಣದಲ್ಲಿ ಡೆಲ್ಲಿ ತಂಡ ಲಖನೌ ತಂಡದ ವಿರುದ್ಧ 1 ವಿಕೆಟ್ ಅಂತರದ ರೋಚಕ ಜಯ ಗಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ತಂಡ ಎದುರಾಳಿ ತಂಡವನ್ನು ನಿಗದಿತ 20 ಓವರ್ ಗಳಿಗೆ 8 ವಿಕೆಟ್ ನಷ್ಟಕ್ಕೆ 209 ರನ್ ಗಳಿಗೆ ಕಟ್ಟಿ ಹಾಕಿತು.
ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಆರಂಭದಲ್ಲಿ ಬ್ಯಾಟಿಂಗ್ ವೈಫಲ್ಯ ಎದುರಿಸಿತು. ಆದರೆ ಕ್ರಮೇಣ ಮಧ್ಯ ಕ್ರಮಾಂಕದ ಆಟಗಾರರು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಶುತೋಶ್ ಶರ್ಮಾ 29 ಎಸೆತಗಳಲ್ಲಿ 47 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
ಅಂತಿಮವಾಗಿ ಡೆಲ್ಲಿ ತಂಡ 19.3 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 211 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು.
Advertisement