
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಲಖನೌ- ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಲಖನೌ ತಂಡ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಲಖನೌ ತಂಡ ಹೈದರಾಬಾದ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಗೆ ಕಟ್ಟಿ ಹಾಕಿತು.
ಎಲ್ಎಸ್ ಜಿ ತಂಡದ ಪರ ಶಾರ್ದೂಲ್ ಠಾಕೂರ್ 4 ವಿಕೆಟ್ ಗಳಿಸಿದರೆ, ಆವೇಶ್ ಖಾನ್, ದಿಗ್ವೇಶ್ ರಥಿ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು.
190 ರನ್ ಗಳ ಗುರಿ ಬೆನ್ನಟ್ಟಿದ ಎಲ್ ಎಸ್ ಜಿ ತಂಡಕ್ಕೆ ಮಿಚೆಲ್ ಮಾರ್ಷ್ 31 ಎಸೆತಗಳಲ್ಲಿ 52 ರನ್ ಗಳಿಸುವ ಮೂಲಕ ಅತ್ಯುತ್ತಮ ಬುನಾದಿ ಹಾಕಿಕೊಟ್ಟರು.
ಬಳಿಕ ನಿಕೋಲಸ್ ಪೂರನ್ 26 ಎಸೆತಗಳಲ್ಲಿ 70 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಡೇವಿಡ್ ಮಿಲ್ಲರ್ 7 ಎಸೆತಗಳಲ್ಲಿ 13 ರನ್ ಅಬ್ದುಲ್ ಸಮದ್ 8 ಎಸೆತಗಳಲ್ಲಿ 22 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು.
ಈ ಗೆಲುವಿನ ಮೂಲಕ ಎಲ್ ಎಸ್ ಜಿ ತಂಡ ಸೀಸನ್ ನ ಮೊದಲ ಗೆಲುವನ್ನು ದಾಖಲಿಸಿದೆ.
Advertisement