Rajat Patidar Joins Virat Kohli In Elite Captains List After RCB
ರಜತ್ ಪಾಟಿದಾರ್

IPL 2025: CSK ವಿರುದ್ಧ ಭರ್ಜರಿ ಬ್ಯಾಟಿಂಗ್; Virat Kohli ಇರುವ ಎಲೈಟ್ ಗ್ರೂಪ್ ಸೇರಿದ RCB ನಾಯಕ Rajat Patidar

ಆರ್ ಸಿಬಿ ಬ್ಯಾಟಿಂಗ್ ವೇಳೆ ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ರಜತ್ ಪಾಟಿದಾರ್ 32 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 51 ರನ್ ಕಲೆಹಾಕಿ ಟೂರ್ನಿಯ ತಮ್ಮ ಮೊದಲ ಅರ್ಧಶತಕ ಸಿಡಿಸಿದರು.
Published on

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ ಸಿಬಿ ತಂಡ50 ರನ್ ಗಳ ಅಂತರದಲ್ಲಿ ಗೆದ್ದಿದ್ದು, ಇದೇ ಪಂದ್ಯದಲ್ಲಿ ಆರ್ ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 50 ರನ್ ಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಅವರ ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 196 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಆರ್ ಸಿಬಿ ನೀಡಿದ 198 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಚೆನ್ನೈ ತಂಡ ನಿಗದಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್ ಗಳನ್ನಷ್ಟೇ ಗಳಿಸಿ 50 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

Rajat Patidar Joins Virat Kohli In Elite Captains List After RCB
IPL 2025: DRS... ಧೋನಿ ರಿವ್ಯೂ ಸಿಸ್ಟಮ್ ಅಲ್ಲ.. Kohli ರಿವ್ಯೂ ಸಿಸ್ಟಮ್.. ಪಾಟಿದಾರ್ ಗೆ 'ಕಿಂಗ್' ಸೂಚನೆ!

ರಜತ್ ಪಾಟಿದಾರ್ ಭರ್ಜರಿ ಬ್ಯಾಟಿಂಗ್

ಇನ್ನು ಆರ್ ಸಿಬಿ ಬ್ಯಾಟಿಂಗ್ ವೇಳೆ ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ರಜತ್ ಪಾಟಿದಾರ್ 32 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 51 ರನ್ ಕಲೆಹಾಕಿ ಟೂರ್ನಿಯ ತಮ್ಮ ಮೊದಲ ಅರ್ಧಶತಕ ಸಿಡಿಸಿದರು. ಈ ಪಂದ್ಯದಲ್ಲಿ ರಜತ್ ಬರೊಬ್ಬರಿ 4 ಬಾರಿ ಜೀವದಾನ ಪಡೆದಿದ್ದು ವಿಶೇಷ.. ಅದಾಗ್ಯೂ ತಮ್ಮ ಬ್ಯಾಟಿಂಗ್ ನತ್ತ ಗಮನ ಹರಿಸಿದ ರಜತ್ ಪಾಟಿದಾರ್ ಅರ್ಧಶತಕ ಸಿಡಿಸಿ ಅಪರೂಪದ ದಾಖಲೆಗೆ ಪಾತ್ರರಾದರು.

ಕೊಹ್ಲಿ ಇರುವ ಎಲೈಟ್ ಗ್ರೂಪ್ ಸೇರ್ಪಡೆ

ಇನ್ನು ನಿನ್ನೆಯ ಅರ್ಧಶತಕದೊಂದಿಗೆ ರಜತ್ ಪಾಟಿದಾರ್ ಚೆಪಾಕ್ ಕ್ರೀಡಾಂಗಣದಲ್ಲಿ ಅರ್ಧಶತಕ ಸಿಡಿಸಿದ ಆರ್ ಸಿಬಿ ತಂಡದ 2ನೇ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ 2013 ರಲ್ಲಿ ಆರ್ ಸಿಬಿಯ ಅಂದಿನ ನಾಯಕ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ರಜತ್ ಪಾಟಿದಾರ್ ಈ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಸತತ ಗಾಯದ ನಡುವೆಯೂ ಭರ್ಜರಿ ಕಮ್ ಬ್ಯಾಕ್

ಇನ್ನು 2022ರ ಐಪಿಎಲ್ ಎಲಿಮಿನೇಟರ್‌ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಅದ್ಭುತ ಶತಕ ಸಿಡಿಸಿದ್ದರು. ಅವರ ಈ ಶತಕ ಪಾಟಿದಾರ್ ರನ್ನು ಆರ್ ಸಿಬಿಯ ಸ್ಟಾರ್ ಆಟಗಾರನ ಪಟ್ಟಕ್ಕೇರಿಸಿತು. ಆದರೆ 2023 ರ ಋತುವಿನಲ್ಲಿ ರಜತ್ ಪಾಟಿದಾರ್ ಸತತವಾಗಿ ಗಾಯಗೊಂಡು ತಂಡದಿಂದ ಹೊರಗುಳಿಯಬೇಕಾಯಿತು. ಆದರೆ 2024ರ ಆವೃತ್ತಿಯಲ್ಲಿ ಮತ್ತೆ ಭರ್ಜರಿ ಕಮ್ ಬ್ಯಾಕ್ ಮಾಡಿದ ರಜತ್ ಪಾಟಿದಾರ್ ಅಸಾಧಾರಣ ಪ್ರದರ್ಶನ ತೋರಿ ಇದೀಗ 2025ರ ಆವೃತ್ತಿಯಲ್ಲಿ ತಂಡದ ಸಾರಥ್ಯವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com