
ಐಪಿಎಲ್ 2025ರ 9ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆದರೆ, ಗುಜರಾತ್ ಉತ್ತಮ ಆರಂಭ ಪಡೆಯಿತು. ಗಿಲ್ ಮತ್ತು ಸಾಯಿ ಸುದರ್ಶನ್ ಜೋಡಿ ಮೊದಲ ವಿಕೆಟ್‌ಗೆ 78 ರನ್‌ಗಳ ಜೊತೆಯಾಟವನ್ನು ನೀಡಿತು. ಈ ಪಂದ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಅವರ ಪ್ರೇಯಸಿ ಎಂದು ಹೇಳಲಾಗುವ ಯುವತಿ ಪಾಂಡ್ಯನನ್ನು ಹುರಿದುಂಬಿಸುತ್ತಿರುವುದು ಕಂಡುಬರುತ್ತದೆ.
ಐಪಿಎಲ್ 2024ರ ಕೊನೆಯ ಪಂದ್ಯದಲ್ಲಿ ಮೂರನೇ ಬಾರಿಗೆ ನಿಧಾನ ಗತಿಯ ಬೌಲಿಂಗ್ ನಿಂದಾಗಿ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಿದ್ದರು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಆದಾಗ್ಯೂ, ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2025 ರ ಒಂಬತ್ತನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ಮರಳಿದರು. ಈ ಪಂದ್ಯದಲ್ಲಿ, ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಾ ಮೈದಾನಕ್ಕೆ ಬಂದರು.
ಆ ಸಮಯದಲ್ಲಿ ಪಾಂಡ್ಯ ಗೆಳತಿ ಎಂದು ಹೇಳಲಾಗುವ ಜಾಸ್ಮಿನ್ ವಾಲಿಯಾ ಸ್ಟ್ಯಾಂಡ್‌ನಲ್ಲಿ ಕುಳಿತಿರುವುದು ಕ್ಯಾಮೆರಾ ಕಣ್ಣಲ್ಲಿ ಸೆರೆಯಾದರು. ಬ್ರಿಟಿಷ್ ಗಾಯಕಿ ವಾಲಿಯಾ, ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಪಕ್ಕದಲ್ಲಿ ಕುಳಿತಿರುವುದು ಕಾಣಬಹುದು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸರ್ಬಿಯನ್ ನರ್ತಕಿ ಮತ್ತು ರೂಪದರ್ಶಿ ನಟಾಸಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನ ಪಡೆದ ನಂತರ ಹಾರ್ದಿಕ್ ಪಾಂಡ್ಯ ವಾಲಿಯಾ ಜೊತೆ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪಾಂಡ್ಯ ಆಡುತ್ತಿರುವಾಗ ವಾಲಿಯಾ ಹಲವಾರು ಬಾರಿ ಸ್ಟ್ಯಾಂಡ್‌ಗಳಲ್ಲಿ ಹಾರ್ದಿಕ್ ಅವರನ್ನು ಹುರಿದುಂಬಿಸುತ್ತಿರುವುದು ಕಂಡುಬಂದಿತು.
Advertisement