
ಅಹಮದಾಬಾದ್: ಗುಜರಾತ್ ಟೈಟಾನ್ಸ್ (GT) ವಿರುದ್ಧ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ (MI) ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡವು ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ವಿರುದ್ಧ 36 ರನ್‌ಗಳಿಂದ ಸೋತಿತು.
'ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯ ಗುಜರಾತ್ ಟೈಟಾನ್ಸ್ ವಿರುದ್ಧದ 9ನೇ ಪಂದ್ಯದ ವೇಳೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
'ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಈ ಆವೃತ್ತಿಯಲ್ಲಿ ಇದು ಮೊದಲನೇ ಅಪರಾಧವಾಗಿರುವುದರಿಂದ ಪಾಂಡ್ಯಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಜಿಟಿ 196 ರನ್‌ಗಳನ್ನು ಗಳಿಸಿತು. ಜಿಟಿ ನೀಡಿದ 197 ರನ್ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ ಆರು ವಿಕೆಟ್ ನಷ್ಟಕ್ಕೆ ಕೇವಲ 160 ರನ್‌ಗಳಿಸಿ ಸೋಲು ಕಂಡಿತು. ಈ ಮೂಲಕ ಜಿಟಿ ಈ ಆವೃತ್ತಿಯಲ್ಲಿ ಮೊದಲನೇ ಗೆಲುವು ದಾಖಲಿಸಿತು. ಇದು ಎಂಐನ ಸತತ ಎರಡನೇ ಸೋಲಾಗಿದೆ.
Advertisement