
ಜೈಪುರ: ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ರ 50 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿತು.
ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಇದು ಸತತ ಆರನೇ ಗೆಲುವಾಗಿದೆ. ಈ ಮೂಲಕ ಪಾಯಿಂಟ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಅಗ್ರಸ್ಥಾನಕ್ಕೇರಿತು.
11 ಪಂದ್ಯಗಳಿಂದ 14 ಅಂಕಗಳೊಂದಿಗೆ 1, 274 ನೆಟ್ ರನ್ ರೇಟ್ ನೊಂದಿಗೆ ಮುಂಬೈ ಇಂಡಿಯನ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಪಂದ್ಯಗಳಿಂದ 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಂತರ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಎರಡನೇ ತಂಡವಾಗಿದೆ.
Advertisement