
ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಪಂಜಾಬ್ ಕಿಂಗ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅದ್ಭುತ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಪರ ಯುವ ಆರಂಭಿಕ ಆಟಗಾರ ಪ್ರಭ್ಸಿಮ್ರಾನ್ ಸಿಂಗ್ (91) ಅವರ ಅರ್ಧಶತಕ ಸಿಡಿಸಿದರು. ಇವರಲ್ಲದೆ, ನಾಯಕ ಶ್ರೇಯಸ್ ಅಯ್ಯರ್ 45 ರನ್ ಮತ್ತು ಜೋಶ್ ಇಂಗ್ಲಿಸ್ 30 ರನ್ ಕೊಡುಗೆ ನೀಡಿದರು. ಕೊನೆಯಲ್ಲಿ ಶಶಾಂಕ್ ಸಿಂಗ್ 15 ಎಸೆತಗಳಲ್ಲಿ ಅಜೇಯ 33 ರನ್ ಬಾರಿಸಿದ್ದು ಇದರಿಂದ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಐದು ವಿಕೆಟ್ ನಷ್ಟಕ್ಕೆ 236 ರನ್ ಗಳಿಸಿದ್ದು ಲಖನೌಗೆ ಗೆಲ್ಲಲು 237 ರನ್ ಗಳ ಗುರಿ ನೀಡಿತ್ತು. ಎಲ್‌ಎಸ್‌ಜಿ ಪರ ಆಕಾಶ್ ಸಿಂಗ್ ಮತ್ತು ದಿಗ್ವೇಶ್ ರಥಿ ತಲಾ ಎರಡು ವಿಕೆಟ್ ಪಡೆದರು. ಪ್ರಿನ್ಸ್ ಯಾದವ್ ಒಂದು ವಿಕೆಟ್ ಪಡೆದರು.
ಪಂಜಾಬ್ ಕಿಂಗ್ಸ್ ನೀಡಿದ 237 ರನ್ ಗಳ ಗುರಿ ಬೆನ್ನಟ್ಟಿದ ಲಖನೌಗೆ ಆರಂಭಿಕ ಆಘಾತ ಎದುರಾಯಿತು. ಮಾರ್ಕ್ರಾಮ್ 13 ರನ್ ಗಳಿಸಿ ಔಟಾದರೆ ಮಿಚೆಲ್ ಮಾರ್ಸ್ ಶೂನ್ಯಕ್ಕೆ ಔಟಾದರು. ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಪೂರನ್ ಸಹ 6 ರನ್ ಗಳಿಗೆ ಔಟಾಗಿದ್ದು ಲಖನೌಗೆ ತೀವ್ರ ಹಿನ್ನಡೆಯಾಗುವಂತೆ ಮಾಡಿತು. ಆದರೆ ಆಯೂಷ್ ಬದೋನಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 74 ರನ್ ಗಳಿಸಿದ್ದು ತಂಡದ ಗೆಲುವಿಗೆ ಸಾಕಷ್ಟು ಪ್ರಯತ್ನಿಸಿದರು. ಆದರೆ ಲಖನೌ ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಲಷ್ಟೇ ಶಕ್ತವಾಗಿದ್ದು 37 ರನ್ ಸೋಲು ಕಂಡಿದೆ.
Advertisement