
ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ಟೀಂ ಇಂಡಿಯಾದ T20 ನಾಯಕ ಸೂರ್ಯಕುಮಾರ್ ಯಾದವ್ ಶ್ಲಾಘಿಸಿದ್ದಾರೆ. ಆರ್‌ಸಿಬಿ ನೀಡಿದ್ದ 214 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಸಿಎಸ್‌ಕೆ ಪರ ಆಯುಷ್ ಮ್ಹಾತ್ರೆ ಕೇವಲ 48 ಎಸೆತಗಳಲ್ಲಿ 94 ರನ್ ಗಳಿಸಿದರು. ಆದರೆ, ಅಂತಿಮವಾಗಿ RCB ಎರಡು ರನ್‌ಗಳ ರೋಚಕ ಗೆಲುವು ಸಾಧಿಸಿತು.
ಆದಾಗ್ಯೂ, ದೇಶೀಯ ಕ್ರಿಕೆಟ್‌ನಲ್ಲಿ ಅವರ ತಂಡದ ಸಹ ಆಟಗಾರ ಸೂರ್ಯಕುಮಾರ್ ಸೇರಿದಂತೆ ಎಲ್ಲರನ್ನೂ ಮೆಚ್ಚಿಸುವಲ್ಲಿ ಮ್ಹಾತ್ರೆ ಯಶಸ್ವಿಯಾಗಿದ್ದಾರೆ. ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಆಯುಷ್ ಮ್ಹಾತ್ರೆ ಅವರ ಬ್ಯಾಟಿಂಗ್ ಪ್ರದರ್ಶನ ಅದ್ಭುತವಾಗಿತ್ತು.
'ಇಂಟೆಂಟ್, ಧೈರ್ಯ ಮತ್ತು ಉತ್ಸಾಹದಿಂದ ತುಂಬಿದ ಇನಿಂಗ್ಸ್! ಭವಿಷ್ಯ ಇಲ್ಲಿದೆ. ಈ ಹೆಸರನ್ನು ನೆನಪಿಡಿ' ಎಂದು ಸೂರ್ಯಕುಮಾರ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ವಿಕೆಟ್ ಕಳೆದುಕೊಂಡು 213 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ವಿರಾಟ್ ಕೊಹ್ಲಿ 33 ಎಸೆತಗಳಲ್ಲಿ 5 ಬೌಂಡರಿ 5 ಸಿಕ್ಸರ್ ಸಹಿತ 62 ರನ್ ಮತ್ತು ಜೇಕಬ್ ಬೆಥೆಲ್ 55 ರನ್ ಗಳಿಸಿ ಮಿಂಚಿದರು. ಬಳಿಕ ಬಂದ ರೊಮಾರಿಯೋ ಶೆಫರ್ಡ್ ಕೊನೆಯ 14 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಹಿತ ಅಜೇಯ 54 ರನ್ ಗಳಿಸಿದರು. RCB ಐದು ವಿಕೆಟ್ ನಷ್ಟಕ್ಕೆ 213 ರನ್‌ಗಳ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
214 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಆರಂಭ ಪಡೆಯಿತು. ಮ್ಹಾತ್ರೆ 48 ಎಸೆತಗಳಲ್ಲಿ ಐದು ಸಿಕ್ಸರ್ ಮತ್ತು ಒಂಬತ್ತು ಬೌಂಡರಿ ಸಹಿತ 94 ರನ್ ಗಳಿಸಿದರು. ಆದರೂ, ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸಿಎಸ್‌ಕೆ 2 ರನ್‌ಗಳಿಂದ ಸೋಲೋಪ್ಪಿಕೊಂಡಿತು.
ಆರ್‌ಸಿಬಿ ಪರ ಲುಂಗಿ ಎನ್‌ಗಿಡಿ 3/30 ಗಳಿಸಿ ತಂಡಕ್ಕೆ ನೆರವಾದರು. ಮರಳಿದರು.
ಒಂದೇ ಆವೃತ್ತಿಯಲ್ಲಿ ಆರ್‌ಸಿಬಿ ತವರು ಮತ್ತು ತವರಿನ ಹೊರಗೆ ಸಿಎಸ್‌ಕೆ ತಂಡವನ್ನು ಸೋಲಿಸಿದ್ದು ಇದೇ ಮೊದಲು. ಆರ್‌ಸಿಬಿ ಕೊನೆಯ ಬಾರಿಗೆ ಒಂದೇ ಆವೃತ್ತಿಯಲ್ಲಿ ಸಿಎಸ್‌ಕೆ ವಿರುದ್ಧ ಎರಡು ಪಂದ್ಯಗಳನ್ನು ಗೆದ್ದಿದ್ದು 2009 ರಲ್ಲಿ, ಆದರೆ ಆ ಗೆಲುವುಗಳಲ್ಲಿ ಒಂದು ಸೆಮಿಫೈನಲ್‌ನಲ್ಲಿ ಬಂದಿತು. ಆ ಆವೃತ್ತಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಆಡಲಾಯಿತು.
Advertisement