IPL 2025 ಸ್ಥಗಿತ: ಈ ಹಿಂದೆ ಐಪಿಎಲ್ ಅನ್ನು ಅರ್ಧಕ್ಕೆ ನಿಲ್ಲಿಸಿದ್ದು ಯಾವಾಗ ಗೊತ್ತಾ?

ವಿಶ್ವದ ಅತ್ಯಂತ ಶ್ರೀಮಂತ ಲೀಗ್ ಐಪಿಎಲ್ 2025 ಮಾರ್ಚ್ 22 ರಂದು ಪ್ರಾರಂಭವಾಯಿತು ಮತ್ತು ಮೇ 25ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಫೈನಲ್‌ ಮೂಲಕ ಮುಕ್ತಾಯಗೊಳ್ಳಬೇಕಿತ್ತು.
ಐಪಿಎಲ್ ಟ್ರೋಫಿ
ಐಪಿಎಲ್ ಟ್ರೋಫಿ
Updated on

ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ 2025ರ ಐಪಿಎಲ್ ಅನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದ್ದು, ಲೀಗ್ ಹಂತದ 14 ಸೇರಿದಂತೆ ಇನ್ನೂ 16 ಪಂದ್ಯಗಳು ಉಳಿದಿವೆ. ಐಪಿಎಲ್ ಇತಿಹಾಸದಲ್ಲಿ ಎರಡನೇ ಬಾರಿ ಅತಿದೊಡ್ಡ ಟಿ20 ಲೀಗ್ ಸ್ಥಗಿತಗೊಂಡಿದೆ. 2009 ರಲ್ಲಿ ಸಾರ್ವತ್ರಿಕ ಚುನಾವಣೆಯಿಂದಾಗಿ ಭಾರತದಿಂದ ಹೊರಗೆ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸಲಾಗಿತ್ತು ಮತ್ತು 2014ರಲ್ಲಿ ಭಾಗಶಃ ಪಂದ್ಯಗಳು ಸ್ಥಗಿತಗೊಂಡಿದ್ದವು.

ಇದೀಗ ಐಪಿಎಲ್ 2025ನೇ ಆವೃತ್ತಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ. ಟೂರ್ನಿಯ ಪುನರಾರಂಭದ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2021 ರಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಅರ್ಧಕ್ಕೆ ನಿಲ್ಲಿಸಲಾಯಿತು.

ಆಟಗಾರರು ಮತ್ತು ಸಿಬ್ಬಂದಿಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಕಾರಣದಿಂದಾಗಿ 2021ರ ಮೇನಲ್ಲಿ ನಿಲ್ಲಿಸಲಾಯಿತು. 2021ರ ಸೆಪ್ಟೆಂಬರ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಪುನರಾರಂಭಿಸಲಾಯಿತು.

ಪ್ರಪಂಚದ ಕ್ರಿಕೆಟ್ ತಾರೆಗಳನ್ನು ಒಳಗೊಂಡ 10 ತಂಡಗಳ ಐಪಿಎಲ್ ಪಂದ್ಯಾವಳಿಯು ವಿಶ್ವದ ಅತ್ಯಂತ ಶ್ರೀಮಂತ ಲೀಗ್ ಎನಿಸಿಕೊಂಡಿದೆ. ಮಾರ್ಚ್ 22 ರಂದು ಐಪಿಎಲ್ 2025 ಪ್ರಾರಂಭವಾಯಿತು ಮತ್ತು ಮೇ 25ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಫೈನಲ್‌ ಮೂಲಕ ಮುಕ್ತಾಯಗೊಳ್ಳಬೇಕಿತ್ತು. ಲೀಗ್‌ನಲ್ಲಿ ಆಸ್ಟ್ರೇಲಿಯನ್ನರಾದ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್ ಮತ್ತು ಮಿಚ್ ಮಾರ್ಷ್ ಇದ್ದಾರೆ. ಮಾಜಿ ನಾಯಕ ರಿಕಿ ಪಾಂಟಿಂಗ್ ಪಂಜಾಬ್ ಕಿಂಗ್ಸ್‌ಗೆ ತರಬೇತಿ ನೀಡುತ್ತಿದ್ದಾರೆ.

ಐಪಿಎಲ್ ಟ್ರೋಫಿ
IPL 2025: ಭಾರತ-ಪಾಕಿಸ್ತಾನ ನಡುವೆ ಹೆಚ್ಚಿದ ಉದ್ವಿಗ್ನತೆ; ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

ಲಕ್ನೋ ಸೂಪರ್ ಜೈಂಟ್ಸ್ ತಂಡವು ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಬೇಕಿತ್ತು. ಆದಾಗ್ಯೂ, ಆಟಗಾರರ ಸುರಕ್ಷತೆಯ ಬಗ್ಗೆ ಕಳವಳಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ.

ಕ್ರಿಕೆಟ್ ಆಸ್ಟ್ರೇಲಿಯಾ ಶುಕ್ರವಾರ, 'ನಾವು ಪಾಕಿಸ್ತಾನ ಮತ್ತು ಭಾರತದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಲ್ಲಿರುವ ನಮ್ಮ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿದ್ದೇವೆ' ಎಂದು ಹೇಳಿದೆ. ಈಮಧ್ಯೆ, ಆಟಗಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನದ ಟಿ20 ಲೀಗ್ ಈಗಾಗಲೇ ತನ್ನ ಉಳಿದ ಪಂದ್ಯಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಸ್ಥಳಾಂತರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com