IPL 2025: ಐಪಿಎಲ್ ಸ್ಥಗಿತದ ಬೆನ್ನಲ್ಲೇ BCCI ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಆಫರ್!

ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಗುರುವಾರ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಭದ್ರತಾ ಕಾರಣಗಳಿಂದಾಗಿ ಅದನ್ನು ಅರ್ಧಕ್ಕೆ ರದ್ದುಗೊಳಿಸಲಾಯಿತು.
ಐಪಿಎಲ್ ಟ್ರೋಫಿ
ಐಪಿಎಲ್ ಟ್ರೋಫಿ
Updated on

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಐಪಿಎಲ್ 2025ನೇ ಆವೃತ್ತಿಯನ್ನು ಒಂದು ವಾರ ಸ್ಥಗಿತಗೊಳಿಸಲಾಗಿದೆ. ಈ ಮಧ್ಯೆ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ನ ಉಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಯೋಜಿಸಿ ಎಂದು ಹೇಳಿರುವುದಾಗಿ ವರದಿಯಾಗಿದೆ.

ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಗುರುವಾರ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಭದ್ರತಾ ಕಾರಣಗಳಿಂದಾಗಿ ಅದನ್ನು ಅರ್ಧಕ್ಕೆ ರದ್ದುಗೊಳಿಸಲಾಯಿತು ಮತ್ತು ಸ್ಥಳದಲ್ಲಿದ್ದವರನ್ನು ಸ್ಥಳಾಂತರಿಸಲಾಯಿತು. ಮರುದಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಐಪಿಎಲ್ 2025 ಅನ್ನು ಒಂದು ವಾರ ಸ್ಥಗಿತಗೊಳಿಸಿತು. ಸದ್ಯ ಪ್ಲೇಆಫ್‌ ಸೇರಿದಂತೆ ಪಂದ್ಯಾವಳಿಯಲ್ಲಿ ಇನ್ನೂ 16 ಪಂದ್ಯಗಳು ನಡೆಯಬೇಕಿದೆ.

ಐಪಿಎಲ್ 2025ರ ಭವಿಷ್ಯದ ಬಗ್ಗೆ ಅನಿಶ್ಚಿತತೆ ಉಂಟಾಗುತ್ತಿದ್ದಂತೆ, ಇಸಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಚರ್ಡ್ ಗೌಲ್ಡ್ ಈಗಾಗಲೇ ಬಿಸಿಸಿಐ ಅನ್ನು ಸಂಪರ್ಕಿಸಿ, ಈ ಆವೃತ್ತಿಯ ಉಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಯೋಜಿಸುವ ಇಸಿಬಿಯ ಪ್ರಸ್ತಾಪದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಒಂದು ವಾರದ ನಂತರ ಭಾರತವು ಐಪಿಎಲ್ ಅನ್ನು ಪುನರಾರಂಭಿಸಲು ಸಾಧ್ಯವಾಗದಿದ್ದರೆ, ವರ್ಷದ ಕೊನೆಯಲ್ಲಿ ಇಂಗ್ಲೆಂಡ್‌ನಲ್ಲಿ ಉಳಿದ ಪಂದ್ಯಗಳನ್ನು ಆಯೋಜಿಸಬಹುದು ಎಂದು ಪ್ರಸ್ತಾಪಿಸಲಾಗಿದೆ ಎಂದು ವರದಿ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಇದು ಸಾಧ್ಯವಾಗಬಹುದು. ಆದರೆ, ಸದ್ಯ ಯಾವುದೇ 'ಸಕ್ರಿಯ ಚರ್ಚೆಗಳು' ನಡೆಯುತ್ತಿಲ್ಲ ಎಂದು ಅದು ಹೇಳಿದೆ ಎಂದು ಹಿರಿಯ ಇಸಿಬಿ ಮೂಲವೊಂದು ದೃಢಪಡಿಸಿದೆ.

ಐಪಿಎಲ್ ಟ್ರೋಫಿ
IPL 2025: ಬೆಂಗಳೂರು ಸೇರಿ ಈ ಸ್ಥಳಗಳಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು BCCI ಚಿಂತನೆ

ಕೋವಿಡ್-19 ನಿಂದಾಗಿ 2021ರಲ್ಲಿ ಐಪಿಎಲ್ ಅನ್ನು ಮುಂದೂಡಿದಾಗಲೂ ECB ಇದೇ ರೀತಿಯ ಪ್ರಸ್ತಾಪವನ್ನು ಮುಂದಿಟ್ಟಿತ್ತು ಎಂದು ವರದಿ ತಿಳಿಸಿದೆ. ಅದಾದ ಸುಮಾರು ನಾಲ್ಕು ತಿಂಗಳ ನಂತರ, ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆ ಆವೃತ್ತಿಯನ್ನು ಪುನರಾರಂಭಿಸಿ ಪೂರ್ಣಗೊಳಿಸಲಾಯಿತು.

ಭಾರತದೊಂದಿಗಿನ ಸಂಘರ್ಷದ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೂಪರ್ ಲೀಗ್ ಅನ್ನು ದುಬೈಗೆ ಸ್ಥಳಾಂತರಿಸಲು ನಿರ್ಧರಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಯು-ಟರ್ನ್ ತೆಗೆದುಕೊಂಡು ಟಿ20 ಲೀಗ್‌ನ 10ನೇ ಆವೃತ್ತಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲು ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com