
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ನಿಗ್ನತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ IPL 2025 ಪಂದ್ಯಾವಳಿ ಮೇ 17 ರಿಂದ ಪುನರಾರಂಭವಾಗಲಿದೆ. ಈ ಸಂಬಂಧ ಪರಿಷ್ಕೃತ ವೇಳಾಪಟ್ಟಿಯನ್ನು ಬಿಸಿಸಿಐ ಸೋಮವಾರ ರಾತ್ರಿ ಪ್ರಕಟಿಸಿದೆ.
ಸರ್ಕಾರ, ಭದ್ರತಾ ಏಜೆನ್ಸಿಗಳು ಮತ್ತು ಎಲ್ಲಾ ಪ್ರಮುಖ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ಬಾರಿಯ ಟೂರ್ನಿಯ ಉಳಿದಿರುವ ಪಂದ್ಯಗಳನ್ನು ಪುನರ್ ಆರಂಭಿಸಲು ನಿರ್ಧರಿಸಿದೆ.
ಒಟ್ಟು ಆರು ಕ್ರೀಡಾಂಗಣಗಳಲ್ಲಿ ಒಟ್ಟು 17 ಪಂದ್ಯಗಳು ನಡೆಯಲಿವೆ. ಮೇ 17 ರಂದು ಬೆಂಗಳೂರಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವಿನ ಪಂದ್ಯದೊಂದಿಗೆ ಬಾಕಿ ಉಳಿದಿರುವ ಪಂದ್ಯಗಳು ಪುನರಾರಂಭವಾಗಲಿದೆ. ಜೂನ್ 3, 2025 ರಂದು ಫೈನಲ್ ಪಂದ್ಯ ನಡೆಯಲಿದೆ.
ಪ್ಲೇ ಆಫ್ ಪಂದ್ಯಗಳ ವೇಳಾಪಟ್ಟಿ ಇಂತಿದೆ:
ಮೇ 29 ರಂದು ಮೊದಲ ಕ್ವಾಲಿಫೈಯರ್ ಪಂದ್ಯ
ಮೇ 30 ರಂದು ಎಲಿಮಿನೇಟರ್ ಪಂದ್ಯ
ಜೂನ್ 1 ಎರಡನೇ ಕ್ವಾಲಿಫೈಯರ್ ಪಂದ್ಯ
ಜೂನ್ 3 ರಂದು ಫೈನಲ್ ಪಂದ್ಯ ನಡೆಯಲಿದೆ.
ಈ ಪಂದ್ಯಗಳು ನಡೆಯಲಿರುವ ಕ್ರೀಡಾಂಗಣಗಳನ್ನು ತದನಂತರ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.
ಯಶಸ್ವಿಯಾಗಿ ಲೀಗ್ ಪೂರ್ಣಗೊಳಿಸುವ ಖಾತ್ರಿಯೊಂದಿಗೆ ರಾಷ್ಟ್ರೀಯ ಹಿತಾಸಕ್ತಿಗಳಿಗೆ ತನ್ನ ಬದ್ಧತೆಯನ್ನು BCCI ಪುನರುಚ್ಚರಿಸುತ್ತದೆ.
Advertisement