
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಶನಿವಾರ ಪುನರಾರಂಭವಾಗುವ ಮುನ್ನವೇ ಮಳೆಯಿಂದ ರದ್ದಾಗಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್(KKR) ನಡುವಿನ ಪಂದ್ಯ ಭಾರಿ ಮಳೆಯಿಂದ ರದ್ದಾಗಿದೆ.
ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಗುತ್ತದೆ.
ಕೆಕೆಆರ್ ತಂಡ 12 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು ಒಂದು ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ.
ಇನ್ನು ಆರ್ ಸಿಬಿ ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈಗ ಒಂದು ಪಂದ್ಯ ರದ್ದಾದರೂ ಪ್ಲೇ ಆಫ್ ಸ್ಥಾನ ಖಾತ್ರಿಯಾಗಿದೆ.
Advertisement