ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡದ ಆಟಗಾರರು
ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡದ ಆಟಗಾರರು

IPL 2025: RR vs PBKS ಪಂದ್ಯಕ್ಕೂ ಮುನ್ನ ಭಾರತೀಯ ಸಶಸ್ತ್ರ ಪಡೆಗಳಿಗೆ BCCI ವಿಶೇಷ ಗೌರವ!

ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ಸಲುವಾಗಿ, ಪಂದ್ಯ ಪ್ರಾರಂಭವಾಗುವ ಮೊದಲು ಆಟಗಾರರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.
Published on

ಭಾನುವಾರ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಆವೃತ್ತಿಯ ಪಂದ್ಯಕ್ಕೂ ಮುನ್ನ ಭಾರತೀಯ ಸಶಸ್ತ್ರ ಪಡೆಗಳಿಗೆ ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡದ ಆಟಗಾರರು ಗೌರವ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಒಂದು ವಾರ ಸ್ಥಗಿತಗೊಂಡ ನಂತರ, ಮೇ 17ರಂದು ಶನಿವಾರ ಐಪಿಎಲ್ 2025 ಪುನರಾರಂಭದ ನಂತರ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು.

ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ಸಲುವಾಗಿ, ಪಂದ್ಯ ಪ್ರಾರಂಭವಾಗುವ ಮೊದಲು ಆಟಗಾರರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು. ಸಶಸ್ತ್ರ ಪಡೆಗಳ ಅಮೂಲ್ಯ ಕೊಡುಗೆಗಳನ್ನು ಗೌರವಿಸಿದರು. ಭಾರತದ ರಾಷ್ಟ್ರಗೀತೆ ನುಡಿಸಿದಾಗ ಕ್ರೀಡಾಂಗಣದ ಪರದೆಗಳ ಮೇಲೆ 'ಧನ್ಯವಾದಗಳು ಸಶಸ್ತ್ರ ಪಡೆಗಳು' ಎಂಬ ಸಂದೇಶವನ್ನು ಪ್ರದರ್ಶಿಸಲಾಯಿತು.

ಟಾಸ್ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್, 'ದೇಶಕ್ಕಾಗಿ ಕೆಲಸ ಮಾಡಿದ ಮತ್ತು ನಾವು ಆರಾಮದಾಯಕ ಸ್ಥಾನದಲ್ಲಿರುವಂತೆ ನೋಡಿಕೊಂಡ ಸೇನಾ ಪಡೆಗಳಿಗೆ ಧನ್ಯವಾದಗಳು' ಎಂದು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ ಹೇಳಿದರು.

ಪಿಬಿಕೆಎಸ್ ಪರ ಆಡುತ್ತಿರುವ ಮೂವರು ವಿದೇಶಿ ಆಟಗಾರರು ಮಿಚೆಲ್ ಓವನ್, ಮಾರ್ಕೊ ಜಾನ್ಸೆನ್ ಮತ್ತು ಅಜ್ಮತುಲ್ಲಾ ಒಮರ್ಜೈ.

ರಾಜಸ್ಥಾನ್ ರಾಯಲ್ಸ್ ಪರ, ಸಂಪೂರ್ಣವಾಗಿ ಫಿಟ್ ಆಗಿರುವ ಸಂಜು ಸ್ಯಾಮ್ಸನ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ನಿತೀಶ್ ರಾಣಾ ಬದಲಿಗೆ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಜೋಫ್ರಾ ಆರ್ಚರ್ ಬದಲಿಗೆ ಕ್ವೆನಾ ಮಫಕಾ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೇಯರ್, ಧ್ರುವ್ ಜುರೆಲ್, ವನಿಂದು ಹಸರಂಗ, ಕ್ವೆನಾ ಮಫಕಾ, ತುಷಾರ್ ದೇಶಪಾಂಡೆ, ಆಕಾಶ್ ಮಧ್ವಾಲ್, ಫಜಲ್ಹಕ್ ಫಾರೂಕಿ.

Impact Substitutes: ಕುಮಾರ್ ಕಾರ್ತಿಕೇಯ, ಶುಭಂ ದುಬೆ, ಅಶೋಕ್ ಶರ್ಮಾ, ಕುನಾಲ್ ಸಿಂಗ್ ರಾಥೋಡ್, ಯುಧ್ವೀರ್ ಸಿಂಗ್ ಚರಕ್.

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರನ್ ಸಿಂಗ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ಶಶಾಂಕ್ ಸಿಂಗ್, ನೇಹಲ್ ವಧೇರಾ, ಮಿಚೆಲ್ ಓವನ್, ಅಜ್ಮತುಲ್ಲಾ ಒಮರ್ಜೈ, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

Impact Substitutes: ವೈಶಾಕ್ ವಿಜಯ್‌ಕುಮಾರ್, ಹರ್‌ಪ್ರೀತ್ ಬ್ರಾರ್, ಪ್ರವೀಣ್ ದುಬೆ, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್.

ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ಈಗಾಗಲೇ ಹೊರಬಿದ್ದಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಈ ಪಂದ್ಯ ಸೇರಿದಂತೆ ತಮ್ಮ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯುವ ತವಕದಲ್ಲಿದೆ.

X
Open in App

Advertisement

X
Kannada Prabha
www.kannadaprabha.com