
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆ.ಎಲ್. ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 199 ರನ್ ಸೇರಿಸಿತು.
ಗೆಲುವಿಗೆ 200 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟನ್ಸ್, ಸಾಯಿ ಸುದರ್ಶನ್(108) ಅವರ ಶತಕ ಹಾಗೂ ಶುಭಮನ್ ಗಿಲ್(93) ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಯಾವುದೇ ವಿಕೆಟ್ ನಷ್ಟವಿಲ್ಲದೆ 19 ಓವರ್ ಗಳಲ್ಲಿ 205 ರನ್ ಗಳಿಸುವ ಮೂಲಕ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತು.
ಮೂರು ವರ್ಷಗಳ ನಂತರ ರಾಹುಲ್ ಶತಕ
ರಾಹುಲ್ 65 ಎಸೆತಗಳಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್‌ಗಳಿಂದ ಅಜೇಯ 112 ರನ್ ಬಾರಿಸಿ ಪೆವಿಲಿಯನ್ಗೆ ಮರಳಿದರು. ಈ ಶತಕದೊಂದಿಗೆ ರಾಹುಲ್ 3 ವರ್ಷಗಳ ಕಾಯುವಿಕೆಗೂ ಅಂತ್ಯ ಹಾಡಿದರು. ಇದಕ್ಕೂ ಮೊದಲು, ಐಪಿಎಲ್ 2022 ರ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ 2 ಶತಕ ಬಾರಿಸಿದ್ದರು. ಒಟ್ಟಾರೆಯಾಗಿ, ಇದು ರಾಹುಲ್ ಅವರ ಐಪಿಎಲ್ ವೃತ್ತಿಜೀವನದಲ್ಲಿ 5 ನೇ ಶತಕವಾಗಿದೆ
Advertisement