ಉಭಯ ತಂಡಗಳ ಆಟಗಾರರು
ಕ್ರಿಕೆಟ್
IPL 2025: CSK ವಿರುದ್ಧ RRಗೆ ಆರು ವಿಕೆಟ್ ಭರ್ಜರಿ ಗೆಲುವು
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 62ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(RR) ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಆದರೆ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ, ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 187 ರನ್ ಕಲೆ ಹಾಕಿತು.
ಗೆಲುವಿಗೆ 188ರನ್ ಗಳ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ, ವೈಭವ್ ಸೂರ್ಯವಂಶಿ ಅವರ ಅಬ್ಬರದ ಅರ್ಧ ಶತಕದ ನೆರವಿನಿಂದ 17.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 188 ರನ್ ಗಳಿಸುವ ಮೂಲಕ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.


