IPL 2025: ಪ್ಲೇಆಫ್ ಸ್ಥಾನಕ್ಕಾಗಿ ಪೈಪೋಟಿ ತೀವ್ರ; ಗೆಲ್ಲಲೇಬೇಕಾದ ಅನಿವಾರ್ಯದಲ್ಲಿ Mumbai Indians, Delhi Capitals

ಪ್ಲೇಆಫ್‌ನಲ್ಲಿ ನಾಲ್ಕನೇ ಮತ್ತು ಅಂತಿಮ ಸ್ಥಾನಕ್ಕಾಗಿ ಉಭಯ ತಂಡಗಳು ಸೆಣಸುತ್ತಿವೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಆಟಗಾರರು
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಆಟಗಾರರು
Updated on

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಆವೃತ್ತಿಯಲ್ಲಿ ಈಗಾಗಲೇ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದು, ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಲಿವೆ. ಅಂತಿಮ ಪ್ಲೇಆಫ್ ಸ್ಥಾನಕ್ಕಾಗಿ ಗೆಲ್ಲಲೇಬೇಕಾದ ಅನಿವಾರ್ಯದಲ್ಲಿ ಉಭಯ ತಂಡಗಳು ಸಿಲುಕಿವೆ.

ಆ ಆವೃತ್ತಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ 4 ಗೆಲುವಿನ ಮೂಲಕ ಆರಂಭಿಸಿತು. ಆದರೆ, ಮುಂಬೈ ಇಂಡಿಯನ್ಸ್ ತಂಡ ಮೊದಲ 5 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದು ಸಂಕಷ್ಟಕ್ಕೆ ಸಿಲುಕಿತು. ಆಗ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿತ್ತು. ಇದೀಗ ಎಲ್ಲವೂ ಬದಲಾಗಿದ್ದು, ಮುಂಬೈ ಇಂಡಿಯನ್ಸ್ ತಂಡ 7ರಲ್ಲಿ ಗೆಲುವು ಸಾಧಿಸುವ ಮೂಲಕ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಇದೀಗ, ಪ್ಲೇಆಫ್‌ನಲ್ಲಿ ನಾಲ್ಕನೇ ಮತ್ತು ಅಂತಿಮ ಸ್ಥಾನಕ್ಕಾಗಿ ಉಭಯ ತಂಡಗಳು ಸೆಣಸುತ್ತಿವೆ. ಆರಂಭದಲ್ಲಿ ಎಡವಿದ್ದ ಮುಂಬೈ ಇಂಡಿಯನ್ಸ್ ತಂಡ ಸತತ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೇಲೇರಿದ್ದು, ಡೆಲ್ಲಿ ತಂಡ ಮೂರು ಪಂದ್ಯಗಳನ್ನು ಸೋತು ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ಎರಡೂ ತಂಡಗಳು ಪಂಜಾಬ್ ಕಿಂಗ್ಸ್ ವಿರುದ್ಧ ಇನ್ನೂ ಒಂದು ಪಂದ್ಯವನ್ನು ಆಡಬೇಕಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಪಂದ್ಯವನ್ನು ಗೆದ್ದರೆ ಮುಂಬೈ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ. ಡೆಲ್ಲಿ ತಂಡ ಪ್ಲೇಆಫ್‌ ತಲುಪಲು ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಆಟಗಾರರು
IPL 2025: ಐಪಿಎಲ್ ಇತಿಹಾಸ, ಒಂದೇ ಬಾರಿಗೆ 3 ತಂಡಗಳು ಪ್ಲೇಆಫ್ ಗೆ ಪ್ರವೇಶ

ಪಂದ್ಯಾವಳಿಯ ಆರಂಭದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಇದೀಗ ತಂಡಕ್ಕೆ ಮರಳಿದ್ದಾರೆ. ಟ್ರೆಂಟ್ ಬೌಲ್ಟ್ 18 ವಿಕೆಟ್‌ಗಳನ್ನು ಪಡೆದಿದ್ದರೆ, ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ತಲಾ 13 ವಿಕೆಟ್‌ಗಳನ್ನು ಪಡೆದಿದ್ದಾರೆ. ದೀಪಕ್ ಚಾಹರ್ 10 ವಿಕೆಟ್‌ಗಳನ್ನು ಪಡೆದಿದ್ದರೆ, ಅಶ್ವನಿ ಕುಮಾರ್ ಮತ್ತು ವಿಘ್ನೇಶ್ ಪುತ್ತೂರ್ ಅವರಂತಹ ಯುವ ಪ್ರತಿಭೆಗಳು ತಂಡದಲ್ಲಿದ್ದಾರೆ.

ದೆಹಲಿ ತಂಡವು ಕೆಎಲ್ ರಾಹುಲ್ ಅವರನ್ನು ನೆಚ್ಚಿಕೊಂಡಿದೆ. ಅವರು ಇದುವರೆಗೆ ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಫಾಫ್ ಡು ಪ್ಲೆಸಿಸ್ ಅವರಂತಹ ಆಟಗಾರರು ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ ಒಂದು ವಾರ ಸ್ಥಗಿತಗೊಳ್ಳುವುದಕ್ಕೂ ಮುನ್ನವೇ ಡೆಲ್ಲಿ ತಂಡ ಉತ್ತಮ ಪ್ರದರ್ಶನ ನೀಡುವಲ್ಲಿ ಸೋತಿತ್ತು. ಪುನರಾರಂಭದ ನಂತರ ದೆಹಲಿ ತಂಡವು ಒಂದು ಪಂದ್ಯವನ್ನು ಆಡಿದ್ದು, ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿದೆ. ಆದರೆ, ಮುಂಬೈ ತಂಡವು ಎರಡು ವಾರಗಳ ನಂತರ ಮತ್ತೆ ಮೈದಾನಕ್ಕೆ ಇಳಿಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com