
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(MI) ಬುಧವಾರ ಡೆಲ್ಲಿ ಕ್ಯಾಪಿಟಲ್ಸ್(DC) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಪ್ಲೇಆಫ್‌ಗೆ ಹತ್ತಿರವಾಗಿದೆ.
ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್, ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಅರ್ಧಶತಕ(73)ದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 180 ರನ್ ಕಲೆ ಹಾಕಿತು.
ಗೆಲುವಿಗೆ 181ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, 18.2 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 121 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿದೆ. ಇದರೊಂದಿಗೆ ಅಕ್ಷರ್ ಪಟೇಲ್ ನೇತೃತ್ವದ ತಂಡಕ್ಕೆ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವುದು ಕಷ್ಟವಾಗಲಿದೆ.
Advertisement