IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತಪ್ಪದ ಸಂಕಷ್ಟ; MI vs DC ನಾಕೌಟ್ ಪಂದ್ಯಕ್ಕೂ ಮುನ್ನ ಕನ್ನಡಿಗ ಕೆಎಲ್ ರಾಹುಲ್‌ಗೆ ಗಾಯ

ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್ ಈಗಾಗಲೇ ಟೂರ್ನಿಯಿಂದ ಹೊರಗುಳಿದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
KL Rahul
ಕೆಎಲ್ ರಾಹುಲ್
Updated on

ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ಅದೃಷ್ಟ ಕೆಟ್ಟಿರುವಂತಿದೆ. ತಂಡದ ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್ ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ಕ್ಕೆ ಮರಳಲು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ ತಮ್ಮ ಅತ್ಯುತ್ತಮ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಹುಲ್ ಇದೀಗ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜಿಟಿ, ಆರ್‌ಸಿಬಿ ಮತ್ತು ಪಿಬಿಕೆಎಸ್ ತಂಡಗಳು ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದು, ನಾಲ್ಕನೇ ಮತ್ತು ಅಂತಿಮ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಸೆಣೆಸಾಟ ನಡೆಯಲಿದೆ. ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಇಂದು (ಬುಧವಾರ) ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಇಂಡಿಯನ್ಸ್ (ಎಂಐ) ತಂಡವನ್ನು ಸೋಲಿಸಬೇಕಾಗಿದೆ. ಅಕ್ಷರ್ ಪಟೇಲ್ ನೇತೃತ್ವದ ತಂಡವು ತಮ್ಮ ಕೊನೆಯ 4 ಪಂದ್ಯಗಳಲ್ಲಿ 3ರಲ್ಲಿ ಸೋಲು ಕಂಡು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದೆ. ಹಾರ್ದಿಕ್ ಪಾಂಡ್ಯ ಪಡೆ ತಮ್ಮ ಕೊನೆಯ 5 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆದ್ದು ಈ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಈ ಬೆನ್ನಲ್ಲೇ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಆವೃತ್ತಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಕೆಎಲ್ ರಾಹುಲ್ ಅವರು ಗಾಯದಿಂದಾಗಿ ತಂಡದಿಂದ ಹೊರಗುಳಿಯುವ ಭೀತಿ ಎದುರಾಗಿದೆ. ಫಾಫ್ ಡು ಪ್ಲೆಸಿಸ್ ಅಷ್ಟೇನು ಉತ್ತಮ ಪ್ರದರ್ಶ ನೀಡಿಲ್ಲ. ಕನ್ನಡಿಗ ಕರುಣ್ ನಾಯರ್ ಕೂಡ ಈಗ ತಂಡದಲ್ಲಿಲ್ಲ. ಡಿಸಿಯ ಬ್ಯಾಟಿಂಗ್ ಎಂಜಿನ್ ಆಗಿರುವ ರಾಹುಲ್ ಇದೀಗ ಗಾಯದಿಂದಾಗಿ ಮಾಡು ಇಲ್ಲವೆ ಮಡಿ ಪಂದ್ಯದಿಂದ ಹೊರಗುಳಿಯಬಹುದು ಎನ್ನಲಾಗಿದೆ. ಎಂಐ vs ಡಿಸಿ ಪಂದ್ಯದ ಮುನ್ನಾದಿನದಂದು ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗ ಮುಖೇಶ್ ಕುಮಾರ್ ಎಸೆತದಲ್ಲಿ ರಾಹುಲ್ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ ಎನ್ನಲಾಗಿದೆ.

ರಾಹುಲ್ ಆಡಿರುವ 11 ಇನಿಂಗ್ಸ್‌ಗಳಲ್ಲಿ ಮೂರು ಅರ್ಧಶತಕ ಮತ್ತು ಒಂದು ಶತಕ ಗಳಿಸಿದ್ದಾರೆ. ಇದೀಗ ಕೆಎಲ್ ರಾಹುಲ್ ಕೂಡ ಅಲಭ್ಯರಾದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾದಂತಾಗುತ್ತದೆ. ಈ ಬಗ್ಗೆ ತಂಡವು ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಆತಂಕ ಮನೆಮಾಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಕೆಎಲ್ ರಾಹುಲ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಸಮೀರ್ ರಿಜ್ವಿ, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಟಿ ನಟರಾಜನ್, ಮುಸ್ತಾಫಿಜುರ್ ರೆಹಮಾನ್, ದುಷ್ಮಂತ ಚಮೀರಾ, ಸೇಡಿಕುಲ್ಲಾ ಅಟಲ್, ತ್ರಿಪುರನ್ ವಿಜಯ್, ಮಾಧವ್ ತಿವಾರಿ, ಮೋಹಿತ್ ಶರ್ಮಾ, ಮುಕೇಶ್ ಕುಮಾರ್, ಅಜಯ್ ಜಾದವ್ ಮಂಡಲ್, ದರ್ಶನ್ ನಾಲ್ಕಡೆ, ಡೊನೊವನ್ ಫೆರೇರಾ, ಮನ್ವಂತ್ ಕುಮಾರ್ ಎಲ್

KL Rahul
IPL 2025: ಕಳಪೆ ಫಾರ್ಮ್‌ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮತ್ತೊಂದು ಸಂಕಷ್ಟ; ಟೂರ್ನಿಯಿಂದ ಹೊರಗುಳಿದ ಮಿಚೆಲ್ ಸ್ಟಾರ್ಕ್!

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com