
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಗುರುವಾರ ಪ್ರಬಲ ಗುಜರಾತ್ ಟೈಟಾನ್ಸ್ ತಂಡ(GT) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ಸೂಪರ್ ಜೈಂಟ್ಸ್, ಆರಂಭಿಕರಾದ ಮಿಚೆಲ್ ಮಾರ್ಷ್(117 ) ಅವರ ಅಬ್ಬರದ ಶತಕ ಹಾಗೂ ನಿಕೋಲಸ್ ಪೂರನ್(56) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 235 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು.
ಮಿಚೆಲ್ ಮಾರ್ಷ್ ಅವರು 10 ಬೌಂಡರಿ, 8 ಸಿಕ್ಸರ್ ಒಳಗೊಂಡಂತೆ 117 ರನ್ ಬಾರಿಸಿ ಔಟ್ ಆದರು. ಇದು ಮಿಚೆಲ್ ಮಾರ್ಷ್ ಅವರ ಐಪಿಎಲ್ ವೃತ್ತಿ ಜೀವನದ ಮೊದಲ ಶತಕವಾಗಿದೆ.
ಗೆಲುವಿಗೆ 236ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ, 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 202 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು.
Advertisement