
ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಐಪಿಎಲ್ 2025ರ ಆವೃತ್ತಿಯ ಗೆಲ್ಲಲೇಬೇಕಾದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ನಾಯಕ ಅಕ್ಷರ್ ಪಟೇಲ್ ಅಲಭ್ಯರಾಗಿದ್ದರು. ಸ್ಟಾರ್ ಆಟಗಾರ ಎಡಗೈ ಸ್ಪಿನ್ನರ್ ಮಾತ್ರವಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಸ್ಥಿರ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫಾಫ್ ಡು ಪ್ಲೆಸಿಸ್ ಮುನ್ನಡೆಸಿದರು.
'ಕಳೆದ ಎರಡು ದಿನಗಳಲ್ಲಿ ನಿಜವಾಗಿಯೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಂದು ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಕಳೆದ 5-6 ಪಂದ್ಯಗಳಲ್ಲಿ ನಾವು ಅತ್ಯುತ್ತಮ ಪ್ರದರ್ಶನ ನೀಡಿಲ್ಲ. ಪ್ರತಿದಿನ ಹೊಸ ಅವಕಾಶ ಸಿಗುತ್ತಿದೆ. ಅಕ್ಷರ್ ಪಟೇಲ್ ಇಲ್ಲ. ಅವರಿದ್ದರೆ ಇಬ್ಬರು ಆಟಗಾರರು ಇದ್ದಂತೆ. ಅವರಿಗೆ ಬದಲಿ ಆಟಗಾರನನ್ನು ಹುಡುಕುವುದು ಕಷ್ಟ. ಅದು ಹೇಗೆ ನಡೆಯುತ್ತದೆ ಎಂದು ನೋಡೋಣ' ಎಂದು ಡೆಲ್ಲಿ ಕ್ಯಾಪಿಟಲ್ಸ್‌ನ ಸ್ಟ್ಯಾಂಡ್-ಇನ್ ಕ್ಯಾಪ್ಟನ್ ಫಾಫ್ ಡು ಪ್ಲೆಸಿಸ್ ಟಾಸ್ ವೇಳೆ ಹೇಳಿದರು.
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಈ ವಿಕೆಟ್‌ನಲ್ಲಿ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ನಾಕೌಟ್ ಹಂತಕ್ಕೆ ಮುನ್ನಡೆಯಬೇಕಾದರೆ ನಾವು ಅತ್ಯುತ್ತಮ ಕ್ರಿಕೆಟ್ ಆಡಬೇಕಾಗುತ್ತದೆ. ಈ ವಿರಾಮವು ಅವರಿಗೆ ಮತ್ತೆ ಒಗ್ಗೂಡಿಸಲು ಮತ್ತು ಅವರ ಆವೇಗವನ್ನು ಮುಂದುವರಿಸಲು ಅವಕಾಶ ನೀಡಿದೆ. ಪ್ಲೇಆಫ್‌ಗೂ ಮುನ್ನ ನಾವು ಕೆಲವು ನ್ಯೂನತೆಗಳನ್ನ ಸರಿಪಡಿಸಿಕೊಳ್ಳಬೇಕಿದೆ ಎಂದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚಾದ ಉದ್ವಿಗ್ನತೆಯಿಂದಾಗಿ ಲೀಗ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಯಿತು. ಬಳಿಕ ಮೇ 17ರಿಂದ ಪಂದ್ಯಾವಳಿಯನ್ನು ಆರಂಭಿಸಲಾಯಿತು. ಜಿಟಿ, ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದು, ಕೊನೆಯ ಹಾಗೂ ಅಂತಿಮ ಸ್ಥಾನ ಪಡೆಯಲು ಉಭಯ ತಂಡಗಳಿಗೆ ಇದು ಗೆಲ್ಲಲೇಬೇಕಿದ್ದ ಪಂದ್ಯವಾಗಿತ್ತು. ಎರಡೂ ತಂಡಗಳು ಪಂಜಾಬ್ ಕಿಂಗ್ಸ್ ವಿರುದ್ಧ ಇನ್ನೂ ಒಂದು ಪಂದ್ಯವನ್ನು ಆಡಬೇಕಾಗಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್, ಸೂರ್ಯಕುಮಾರ್ ಯಾದವ್ ಅವರ 73 ರನ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 180 ರನ್ ಕಲೆ ಹಾಕಿತು.
ಗೆಲುವಿಗೆ 181ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, 18.2 ಓವರ್‌ಗಳಲ್ಲಿಯೇ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 121 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಮುಂಬೈ ಎದುರು ಸೋಲೊಪ್ಪಿಕೊಂಡಿತು.
Advertisement