
ಲಖನೌ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 232 ರನ್ ಗಳ ಬೃಹತ್ ಗುರಿ ನೀಡಿದೆ.
ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿ ಆರ್ ಸಿಬಿಗೆ ಗೆಲ್ಲಲು 232 ರನ್ ಗಳ ಬೃಹತ್ ಗುರಿ ನೀಡಿದೆ.
ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಶಾನ್ ಕಿಶನ್ ಕೇವಲ 48 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 94 ರನ್ ಗಳಿಸಿ ಕೇವಲ 6 ರನ್ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.
ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿದ್ದು, ಹೀಗಾಗಿ ಈ ಪಂದ್ಯದಲ್ಲಿ ಜಿತೇಶ್ ಶರ್ಮಾ ನಾಯಕತ್ವ ವಹಿಸಿಕೊಂಡಿದ್ದಾರೆ. ಟಾಸ್ ಗೆದ್ದ ಆರ್‌ಸಿಬಿ ಉಸ್ತುವಾರಿ ನಾಯಕ ಜಿತೇಶ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ದ್ದಾರೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಉತ್ತಮ ಆರಂಭ ಪಡೆಯಿತು.
ಓಪನರ್‌ಗಳಾದ ಅಭಿಷೇಕ್ ಶರ್ಮಾ (34) ಹಾಗೂ ಟ್ರಾವಿಸ್ ಹೆಡ್ (17) ಬಿರುಸಿನ ಆರಂಭವೊದಗಿಸಿದರು. ನಾಲ್ಕು ಓವರ್‌ಗಳಲ್ಲೇ 54 ರನ್‌ಗಳ ಜೊತೆಯಾಟ ಕಟ್ಟಿದರು. ಬಳಿಕ ಕ್ರೀಸ್ ಗಿಳಿದ ಇಶಾನ್ ಕಿಶನ್ ಬಿರುಸಿನ ಆಟದ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು. ಇಶಾನ್ ಕಿಶನ್ ಕೇವಲ 48 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 94 ರನ್ ಗಳಿಸಿ ಕೇವಲ 6 ರನ್ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.
ಇಶಾನ್ ಕಿಶನ್ ಗೆ ಹೆನ್ರಿಚ್ ಕ್ಲಾಸೆನ್ (24) ಹಾಗೂ ಅನಿಕೇತ್ ವರ್ಮಾ (26) ಅವರಿಂದಲೂ ಉತ್ತಮ ಬೆಂಬಲ ದೊರಕಿತು. ಈ ನಡುವೆ ನಿತೀಶ್ ಕುಮಾರ್ ರೆಡ್ಡಿ (4) ಹಾಗೂ ಅಭಿನವ್ ಮನೋಹರ್ (12) ಹಿನ್ನಡೆ ಅನುಭವಿಸಿದರು.
ಅತ್ತ ಆರ್‌ಸಿಬಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಇಶಾನ್, ಮೈದಾನದ ಎಲ್ಲ ದಿಕ್ಕಿಗೂ ಚೆಂಡನ್ನು ಅಟ್ಟಿದರು. ಅಂತಿಮವಾಗಿ 94 ರನ್ ಗಳಿಸಿ ಔಟಾಗದೆ ಉಳಿದರು. ಉಳಿದಂತೆ ನಾಯಕ ಪ್ಯಾಟ್ ಕಮಿನ್ಸ್ 13 ರನ್ ಗಳಿಸಿ ಅಜೇಯರಾಗುಳಿದರು.
ಆರ್‌ಸಿಬಿ ಪರ ರೊಮರಿಯೊ ಶೆಫಾರ್ಡ್ ಎರಡು ವಿಕೆಟ್ ಗಳಿಸಿದರೆ, ಕೃನಾಲ್ ಪಾಂಡ್ಯ, ಸುಯಾಶ್ ಶರ್ಮಾ, ಲುಂಗಿ ಎನ್ಗಿಡಿ, ಭುವಿ ತಲಾ 1 ವಿಕೆಟ್ ಪಡೆದರು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯ ಮಳೆಯಿಂದಾಗಿ ಲಖನೌನ ಏಕಾನಾ ಕ್ರೀಡಾಂಗಣಕ್ಕೆ ಶಿಫ್ಟ್ ಆಗಿತ್ತು.
Advertisement