
ಜೈಪುರ: ಜೈಪುರದಲ್ಲಿ ನಡೆದ ಐಪಿಎಲ್ 2025 ರ ಪಂದ್ಯದಲ್ಲಿ ಪಂಜಾಬ್ ತಂಡ ಮುಂಬೈ ತಂಡದ ವಿರುದ್ಧ 7 ವಿಕೆಟ್ ಗಳ ಜಯ ಗಳಿಸಿದೆ. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಪಂಜಾಬ್ ತಂಡ ತನ್ನ ರನ್ ರೇಟ್ ನ್ನು ಹೆಚ್ಚಿಸಿಕೊಂಡಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ತಂಡ ಮುಂಬೈ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 184 ರನ್ ಗಳಿಗೆ ನಿರ್ಬಂಧಿಸಿತು.
ಮುಂಬೈ ತಂಡದ ಆರಂಭಿಕ ಬ್ಯಾಟ್ಸ್ ಮನ್ ಗಳಾದ ರಯಾನ್ ರಿಕೆಲ್ಟನ್ 20 ಎಸೆತಗಳಲ್ಲಿ 27 ರನ್ ಗಳಿಸಿದರೆ, ರೋಹಿತ್ ಶರ್ಮಾ 21 ಎಸೆತಗಳಲ್ಲಿ 24 ರನ್ ಗಳಿಸಿ ಸಾಧಾರಣ ಆರಂಭ ನೀಡಿದರು ಬಳಿಕ ಸೂರ್ಯ ಕುಮಾರ್ ಯಾದವ್ 39 ಎಸೆತಗಳಲ್ಲಿ 57 ರನ್ ಗಳಿಸಿದ್ದನ್ನು ಹೊರತುಪಡಿಸಿದರೆ, ಉಳಿದ ಬ್ಯಾಟರ್ ಗಳು ಪಂಜಾಬ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ವಿಫಲವಾದರು.
185 ರನ್ ಗಳ ಸಾಧಾರಣ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 62 ರನ್ ಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಆರಂಭ ನೀಡಿದರು. ಜೋಶ್ ಇಂಗ್ಲಿಸ್ 42 ಎಸೆತಗಳಲ್ಲಿ 73 ರನ್ ಗಳನ್ನು ಗಳಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಪಂಜಾಬ್ ತಂಡ 18.3 ಓವರ್ ಗಳಿಗೆ 3 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿ ಗೆಲುವು ಸಾಧಿಸಿತು.
Advertisement