
ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಬುಧವಾರ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಭೇಟಿಯಾಗಿ, ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅದ್ಭುತ ಪ್ರದರ್ಶನಕ್ಕಾಗಿ ಅವರನ್ನು ಅಭಿನಂದಿಸಿದರು. ಮೇ 29ರಂದು ನಡೆಯಲಿರುವ ಕ್ವಾಲಿಫೈಯರ್ 1ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ಸೆಣಸಲಿದೆ.
ಚಡ್ಡಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, 'ಪಂಜಾಬ್ ಕಿಂಗ್ಸ್ ತಂಡವನ್ನು ಭೇಟಿಯಾದೆ ಮತ್ತು ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ಅವರನ್ನು ಅಭಿನಂದಿಸಿದೆ. ತಂಡದ ಉತ್ಸಾಹ, ಶಿಸ್ತು ಮತ್ತು ದೃಢನಿಶ್ಚಯದ ಬಗ್ಗೆ ಪಂಜಾಬ್ ಹೆಮ್ಮೆಪಡುತ್ತದೆ. ಉತ್ಸಾಹ ಮತ್ತು ಉದ್ದೇಶದೊಂದಿಗೆ ಮುನ್ನಡೆಸಿದ್ದಕ್ಕಾಗಿ ತಂಡದ ಮಾಲೀಕರಾದ ಪ್ರೀತಿ ಜಿಂಟಾ, ನಾಯಕ ಶ್ರೇಯಸ್ ಅಯ್ಯರ್ ಮತ್ತು ಕೋಚ್ ರಿಕಿ ಪಾಂಟಿಂಗ್ ಅವರಿಗೆ ವಿಶೇಷ ಧನ್ಯವಾದಗಳು. ನಾಳೆಯ ನಿರ್ಣಾಯಕ ಪಂದ್ಯಕ್ಕೆ ಶುಭಾಶಯಗಳು' ಎಂದು ಬರೆದಿದ್ದಾರೆ.
ಮೇ 29ರಂದು ಗುರುವಾರ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಇದರಲ್ಲಿ ಗೆಲುವು ಸಾಧಿಸುವ ತಂಡ ನೇರವಾಗಿ ಫೈನಲ್ ತಲುಪಲಿದೆ.
ಪಿಬಿಕೆಎಸ್ ತಂಡವು ಆಡಿರುವ ಲೀಗ್ ಹಂತದ 14 ಪಂದ್ಯಗಳಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಆವೃತ್ತಿಯಲ್ಲಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ನೆಟ್ ರನ್ ರೇಟ್ ಕೊಂಚ ಕಡಿಮೆ ಇರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.
ಲೀಗ್ ಹಂತದ ತಮ್ಮ ಅಂತಿಮ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಸೋಲಿಸಿತು.
ಈಮಧ್ಯೆ, ಆರ್‌ಸಿಬಿ ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ನಾಯಕ ಜಿತೇಶ್ ಶರ್ಮಾ ಅವರ ಅಜೇಯ 85 ರನ್‌ಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್ ಅಂತರದಿಂದ ಜಯ ಗಳಿಸಿತು. ಈ ಮೂಲಕ ಐಪಿಎಲ್‌ನಲ್ಲಿ ಅತ್ಯಧಿಕ ರನ್ ಗುರಿಯನ್ನು ಬೆನ್ನಟ್ಟಿದ ದಾಖಲೆ ಬರೆಯಿತು.
Advertisement