

ಹೋಬಾರ್ಟ್: ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 187 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 5 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ ಗುರಿ ಮುಟ್ಟಿದೆ.
ಭಾರತದ ಪರ ಅಭಿಷೇಕ್ ಶರ್ಮಾ 25, ಶುಭ್ ಮನ್ ಗಿಲ್ 15, ಸೂರ್ಯ ಕುಮಾರ್ ಯಾದವ್ 24, ತಿಲಕ್ ವರ್ಮಾ 29, ಅಕ್ಸರ್ ಪಟೇಲ್ 17 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ (49) ಮತ್ತು ಜಿತೇಶ್ ಶರ್ಮಾ 22 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.
ಆಸ್ಟ್ರೇಲಿಯಾ ಪರ ನಾಥನ್ ಎಲ್ಲಿಸ್ 3, ಬಾರ್ಟ್ಲೆಟ್ ಮತ್ತು ಮಾರ್ಕಸ್ ಸ್ಟಾಯ್ನಿಸ್ ತಲಾ 1 ವಿಕೆಟ್ ಪಡೆದರು.
Advertisement