

ಹೋಬಾರ್ಟ್: ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 187 ರನ್ ಗಳ ಬೃಹತ್ ಗುರಿ ನೀಡಿದೆ.
ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 187 ರನ್ ಗಳ ಗುರಿ ನೀಡಿದೆ.
ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ (74) ಮತ್ತು ಮಾರ್ಕಸ್ ಸ್ಟಾಯ್ನಿಸ್ (64) ಅರ್ಧಶತಕ ಗಳಿಸಿ ಆಸಿಸ್ ನ ಬೃಹತ್ ಮೊತ್ತಕ್ಕೆ ಕಾರಣರಾದರು. ಅವರಿಗೆ ಅಂತಿಮ ಹಂತದಲ್ಲಿ ಮ್ಯಾಥ್ಯೂಶಾರ್ಟ್ (26) ಕೂಡ ಉತ್ತಮ ಸಾಥ್ ನೀಡಿದರು.
ಇನ್ನು ಭಾರತದ ಪರ ಅರ್ಶ್ ದೀಪ್ ಸಿಂಗ್ 3, ವರುಣ್ ಚಕ್ರವರ್ತಿ 2 ಮತ್ತು ಶಿವಂ ದುಬೆ 1 ವಿಕೆಟ್ ಪಡೆದರು.
Advertisement