

ಹೋಬಾರ್ಟ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಪ್ರಬಲ ಆಸಿಸ್ ಗೆ ಆರಂಭಿಕ ಆಘಾತ ನೀಡಿದೆ.
ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಕಣಕ್ಕಿಳಿದಿವೆ.
ತಂಡದಲ್ಲಿ ಮೂರು ಬದಲಾವಣೆ, ಸಂಜು ಸ್ಯಾಮ್ಸನ್ ಮತ್ತೆ ಅವಕಾಶ ವಂಚಿತ
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 3 ಬದಲಾವಣೆ ಮಾಡಲಾಗಿದ್ದು, ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಎಡಗೈ ವೇಗಿ ಅರ್ಶ್ ದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಆಸಿಸ್ ಗೆ ಆರಂಭಿಕ ಆಘಾತ
ಇನ್ನು ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ಆರಂಭಿಕ ಆಘಾತ ಎದುರಿಸಿದೆ. ಕೇವಲ 14 ರನ್ ಗಳಿಸುವಷ್ಟರಲ್ಲಿ ತನ್ನ ಪ್ರಮುಖ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕ ಆಟಗಾರರಾದ ಟ್ರಾವಿಸ್ ಹೆಡ್ 6 ರನ್ ಮತ್ತು ಜಾಶ್ ಇಂಗ್ಲಿಶ್ 1 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದಿರುವ ಟಿಮ್ ಡೇವಿಡ್ ಮತ್ತು ನಾಯಕ ಮಿಚೆಲ್ ಮಾರ್ಶ್ ತಂಡಕ್ಕೆ ಆಸರೆಯಾಗಿದ್ದು, ಟಿಮ್ ಡೇವಿಡ್ ಅರ್ಧಶತಕ ಗಳಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ್ದಾರೆ.
ಅಂದಹಾಗೆ ಈ ಪಂದ್ಯವು ಸರಣಿ ಗೆಲ್ಲಲು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸರಣಿಯಲ್ಲಿ ಸಮಬಲ ಸಾಧಿಸಬಹುದು.
Advertisement