

2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿದೆ. ನವಿ ಮುಂಬೈನಲ್ಲಿ ಶೆಫಾಲಿ ವರ್ಮಾ 87 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ದೀಪ್ತಿ ಶರ್ಮಾ ಕೂಡ 58 ರನ್ ಗಳಿಸಿದ್ದರೆ ದಕ್ಷಿಣ ಆಫ್ರಿಕಾ ಪರ ಖಾಖಾ ಮೂರು ವಿಕೆಟ್ ಪಡೆದರು.
ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಮೊದಲ ವಿಕೆಟ್‌ಗೆ 104 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ನೀಡುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಸ್ಮೃತಿ 58 ಎಸೆತಗಳಲ್ಲಿ 45 ರನ್ ಗಳಿಸಿದರು. ಶೆಫಾಲಿ ವರ್ಮಾ ಶತಕ ಗಳಿಸುವ ಅವಕಾಶವನ್ನು ಕಳೆದುಕೊಂಡರು.
ಶೆಫಾಲಿ 78 ಎಸೆತಗಳಲ್ಲಿ 87 ರನ್ ಗಳಿಸಿದ್ದು ಏಳು ಬೌಂಡರಿ ಮತ್ತು ಎರಡು ಸಿಕ್ಸರ್ ಗಳಿಸಿದ್ದಾರೆ. ಹಿಂದಿನ ಪಂದ್ಯದಲ್ಲಿ ಶತಕ ಗಳಿಸಿದ್ದ ಜೆಮಿಮಾ 37 ಎಸೆತಗಳಲ್ಲಿ ಕೇವಲ 24 ರನ್ ಗಳಿಸಿದರು. ನಾಯಕಿ ಹರ್ಮನ್ಪ್ರೀತ್ ಕೌರ್ 29 ಎಸೆತಗಳಲ್ಲಿ 20 ರನ್ ಗಳಿಸಿ ಕ್ಲೀನ್ ಬೌಲ್ಡ್ ಆದರು. ಅಮನ್‌ಜೋತ್ 14 ಎಸೆತಗಳಲ್ಲಿ 12 ರನ್ ಗಳಿಸಿದರು. ರಿಚಾ ಘೋಷ್ 34 ರನ್ ಗಳಿಸಿದರು. ದೀಪ್ತಿ ಶರ್ಮಾ 58 ರನ್ ಗಳಿಸಿ ರನೌಟ್ ಆದರು.
Advertisement