

ಕಳೆದ ತಿಂಗಳು ಆಸ್ಟ್ರೇಲಿಯಾದಲ್ಲಿ ಮಾರಕ ಗಾಯದಿಂದ ಪಾರಾದ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವುದು ಅನುಮಾನ ಎಂದು ವರದಿಯೊಂದು ತಿಳಿಸಿದೆ. ಶುಭಮನ್ ಗಿಲ್ ನೇತೃತ್ವದ ತಂಡವು ಪ್ರೋಟಿಯಸ್ ವಿರುದ್ಧ ರಾಂಚಿ, ರಾಯಪುರ ಮತ್ತು ವಿಶಾಖಪಟ್ಟಣದಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.
ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದ ವೇಳೆ ಅಲೆಕ್ಸ್ ಕ್ಯಾರಿಯನ್ನು ಔಟ್ ಮಾಡಲು ಡೈವಿಂಗ್ ಕ್ಯಾಚ್ ತೆಗೆದುಕೊಳ್ಳುವಾಗ ಗಾಯಗೊಂಡ ಶ್ರೇಯಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವಾರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಂತರ ಬಹಿರಂಗಪಡಿಸಿತು.
ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಬ್ಯಾಟ್ಸ್‌ಮನ್‌ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಫಿಟ್ ಆಗಲು ಹೆಚ್ಚಿನ ಸಮಯ ಬೇಕಾಗುತ್ತದೆ.
'ಅವರು ಸಂಪೂರ್ಣವಾಗಿ ಫಿಟ್ ಆಗಲು ಹೆಚ್ಚಿನ ಸಮಯ ಬೇಕಾಗುತ್ತದೆ ಮತ್ತು ಹೀಗಾಗಿ ಮಂಡಳಿ ಮತ್ತು ಆಯ್ಕೆ ಸಮಿತಿಯು ಆತುರಪಡಲು ಬಯಸುವುದಿಲ್ಲ. ಅವರು ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಆಡುವುದು ಅನುಮಾನ' ಎಂದು ಬಿಸಿಸಿಐ ಮೂಲವೊಂದು ಹೇಳಿರುವುದಾಗಿ ವರದಿ ತಿಳಿಸಿದೆ.
'ಅಯ್ಯರ್ ಅವರ Oxygen level 50ಕ್ಕೆ ಇಳಿದಿತ್ತು ಮತ್ತು ಹತ್ತು ನಿಮಿಷ ಅವರು ಸರಿಯಾಗಿ ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ. ಅವರು ಸಂಪೂರ್ಣ ಬ್ಲಾಕ್ ಔಟ್ ಆಗಿದ್ದರು ಮತ್ತು ಅವರು ಸಾಮಾನ್ಯ ಸ್ಥಿತಿಗೆ ಮರಳಲು ಸ್ವಲ್ಪ ಸಮಯ ತೆಗೆದುಕೊಂಡಿತು' ಎಂದು ಮೂಲಗಳು ತಿಳಿಸಿವೆ.
ಆಸ್ಟ್ರೇಲಿಯಾದಲ್ಲಿ ನಡೆದ ಏಕದಿನ ಸರಣಿ ಸಮಯದಲ್ಲಿ, ಶ್ರೇಯಸ್ ಎರಡು ಪಂದ್ಯಗಳಲ್ಲಿ 72 ರನ್ ಗಳಿಸಿದರು. ಈ ಪೈಕಿ ಅಡಿಲೇಡ್‌ನಲ್ಲಿ ನಡೆದ ಎರಡನೇ ODI ನಲ್ಲಿ 77 ಎಸೆತಗಳಲ್ಲಿ 61 ರನ್ ಗಳಿಸಿದರು. ಈ ಸಮಯದಲ್ಲಿ ಅವರು ರೋಹಿತ್ ಶರ್ಮಾ ಅವರೊಂದಿಗೆ ಶತಕದ ಜೊತೆಯಾಟವಾಡಿದರು.
ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಅವರೊಂದಿಗೆ ಭಾರತೀಯ ಮಧ್ಯಮ ಕ್ರಮಾಂಕದ ಆಧಾರಸ್ತಂಭಗಳಲ್ಲಿ ಒಬ್ಬರಾಗಿರುವ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಅಭಿಮಾನಿಗಳು ಆಶಿಸುತ್ತಾರೆ. ಈ ವರ್ಷ, 11 ಪಂದ್ಯಗಳು ಮತ್ತು 10 ಇನಿಂಗ್ಸ್‌ಗಳಲ್ಲಿ, ಅವರು 49.60ರ ಸರಾಸರಿಯಲ್ಲಿ ಮತ್ತು 89.53 ಸ್ಟ್ರೈಕಿಂಗ್‌ನಲ್ಲಿ 496 ರನ್ ಗಳಿಸಿದ್ದಾರೆ. ಐದು ಅರ್ಧಶತಕಗಳು ಮತ್ತು 79 ಅವರ ಅತ್ಯುತ್ತಮ ಸ್ಕೋರ್ ಆಗಿದೆ.
Advertisement