Cricket: 'ಯಾರೂ ನಮ್ಮನ್ನ ಕ್ಷಮಿಸೊಲ್ಲ.. ನಾವೇನೂ ರೊಬೋಟ್ ಗಳಲ್ಲ..': ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಆಕ್ರೋಶ!

ಯಾರೂ ನಮ್ಮನ್ನು ಕ್ಷಮಿಸುವುದಿಲ್ಲ. ರೊಬೊಟ್‌ಗಳಂತೆ ಪ್ರದರ್ಶನ ನೀಡಬೇಕು ಎಂದು ನಿರೀಕ್ಷಿಸುತ್ತಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Haris Rauf
ಹ್ಯಾರಿಸ್ ರೌಫ್
Updated on

ಇಸ್ಲಾಮಾಬಾದ್: ಏಷ್ಯಾಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿ ತಂಡದ ಸೋಲಿಗೆ ಕಾರಣರಾಗಿದ್ದ ಪಾಕ್ ವೇಗಿ ಹ್ಯಾರಿಸ್ ರೌಫ್ ಅಚ್ಚರಿ ರೀತಿಯಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದ್ದು, ಈ ಪಂದ್ಯದಲ್ಲಿ 61 ರನ್ ನೀಡಿ 4 ವಿಕೆಟ್ ಗಳಿಸಿದ್ದ ಹ್ಯಾರಿಸ್ ರೌಫ್ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು.

ಪಂದ್ಯದ ಬಳಿಕ ತಮ್ಮ ಪ್ರದರ್ಶನದ ಕುರಿತು ಮಾತನಾಡಿದ ಹ್ಯಾರಿಸ್ ರೌಫ್, 'ಯಾರೂ ನಮ್ಮನ್ನು ಕ್ಷಮಿಸುವುದಿಲ್ಲ. ರೊಬೊಟ್‌ಗಳಂತೆ ಪ್ರದರ್ಶನ ನೀಡಬೇಕು ಎಂದು ನಿರೀಕ್ಷಿಸುತ್ತಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಏಷ್ಯಾ ಕಪ್ ಫೈನಲ್‌ ಪಂದ್ಯದಲ್ಲಿ ಭಾರತ ವಿರುದ್ಧದ ಕಳಪೆ ಪ್ರದರ್ಶನಕ್ಕಾಗಿ ರವೂಫ್ ಭಾರಿ ಟೀಕೆಗೆ ಒಳಗಾಗಿದ್ದರು. ಅವರದ್ದೇ ದೇಶದ ಅಭಿಮಾನಿಗಳು ಹ್ಯಾರಿಸ್ ರೌಫ್ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದರು. ಇದು ಹ್ಯಾರಿಸ್ ರೌಫ್ ಮುಜುಗರಕ್ಕೀಡಾಗುವಂತೆ ಮಾಡಿತ್ತು. ಇದೀಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಹ್ಯಾರಿಸ್ ರೌಫ್ ತಂಡದ ಗೆಲುವಿನ ರೂವಾರಿಯಾಗಿದ್ದಾರೆ.

Haris Rauf
Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ

ಈ ಪ್ರದರ್ಶನದ ಬೆನ್ನಲ್ಲೇ ಎರಡೂ ಪರಿಸ್ಥಿತಿಗಳ ಕುರಿತು ಹ್ಯಾರಿಸ್ ರೌಫ್ ಮಾತನಾಡಿದ್ದಾರೆ. 'ನಮಗೂ ಕೆಟ್ಟ ದಿನಗಳು ಬರಬಹುದು. ಆದರೆ ಯಾರೂ ನಮ್ಮನ್ನು ಕ್ಷಮಿಸುವುದಿಲ್ಲ. ನಮ್ಮಿಂದ ರೊಬೊಟ್ ರೀತಿಯಲ್ಲಿ ಪ್ರದರ್ಶನ ನೀಡಬೇಕು ಎಂದು ನಿರೀಕ್ಷೆ ಮಾಡುತ್ತಾರೆ.

ಕೆಲವೊಂದು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಬಹುದು. ಆದರೆ ಅಲ್ಲಿಗೇ ಅದು ಕೊನೆಯಾಗುವುದಿಲ್ಲ. ನಾವು ನಮ್ಮ ಕೌಶಲ್ಯದಲ್ಲಿ ನಂಬಿಕೆ ಇರಿಸುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ. ಓರ್ವ ವೃತ್ತಿಪರ ಆಟಗಾರನಾಗಿ ಯಾವುದೇ ಬೌಲರ್‌ಗೆ ಕೆಟ್ಟ ದಿನಗಳು ಎದುರಾಗಬಹುದು' ಎಂದು ರೌಫ್ ಹೇಳಿದರು.

ಅಂತೆಯೇ 'ಯಾವ ಆಟಗಾರನೂ ಟೀಕೆಯನ್ನು ಇಷ್ಟಪಡುವುದಿಲ್ಲ. ನೀವು 10 ಉತ್ತಮ ಪಂದ್ಯಗಳನ್ನು ಆಡಿದ ಬಳಿಕ ಒಂದು ಕೆಟ್ಟ ಪ್ರದರ್ಶನವನ್ನು ನೀಡಬಹುದು. ಆದರೆ ಕೆಟ್ಟ ಪ್ರದರ್ಶನವನ್ನು ಮಾತ್ರ ಜನರು ನೆನಪಿನಲ್ಲಿಟ್ಟುಕೊಳ್ಳುತ್ತಾರೆ' ಎಂದು ಹೇಳಿದ್ದಾರೆ. ಅಂತೆಯೇ ಪಾಕಿಸ್ತಾನಕ್ಕಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಲು ಉತ್ಸುಕನಾಗಿರುವುದಾಗಿ ರೌಫ್ ಹೇಳಿದ್ದಾರೆ.

ಐಸಿಸಿಯಿಂದ ದಂಡ

ಇನ್ನು ಇದೇ ಹ್ಯಾರಿಸ್ ರೌಫ್ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ವೇಳೆ ಭಾರತದ ವಿರುದ್ಧದ ಪಂದ್ಯದಲ್ಲಿ ರಾಫೆಲ್ ಯುದ್ಧ ವಿಮಾನ ಹೊಡೆದುರುಳಿಸಿದ ಕುರಿತು ಸನ್ಹೆ ಮಾಡಿ ಉದ್ಧಟತನ ಮೆರೆದಿದ್ದರು. ಅವರ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ ಐಸಿಸಿ ದಂಡ ವಿಧಿಸಿತ್ತು. ಟೂರ್ನಿಯ ವೇಳೆ ನಾಲ್ಕನೇ ಡಿಮೆರಿಟ್ ಪಾಯಿಂಟ್ ಪಡೆದ ಕಾರಣಕ್ಕೆ ರವೂಫ್ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಲಾಗಿತ್ತು.

ಅಂದಹಾಗೆ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ಮಣಿಸಿದ್ದ ಭಾರತ ಚಾಂಪಿಯನ್ ಆಗಿತ್ತು. ಈ ಪಂದ್ಯದಲ್ಲಿ ಹ್ಯಾರಿಸ್ ರೌಫ್ ಕೇವಲ 3.4 ಓವರ್‌ಗಳಲ್ಲಿ 50 ರನ್ ಬಿಟ್ಟುಕೊಟ್ಟು ದುಬಾರಿ ಎನಿಸಿದ್ದರು. ಮಾತ್ರವಲ್ಲದೇ ಪಾಕ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com