

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ವೇಳೆ ಗಿಲ್ ಗಾಯಗೊಂಡಿದ್ದರು.
ನಿನ್ನೆ ಆಟ ಮುಗಿದ ನಂತರ ಗಿಲ್ ಅವರನ್ನು ಹೆಚ್ಚಿನ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಅವರು ಇನ್ನು ಮುಂದೆ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಮತ್ತು ಅವರ ವೈದ್ಯಕೀಯ ತಂಡವು ಅವರ ಮೇಲೆ ನಿಗಾ ಇಡುವುದನ್ನು ಮುಂದುವರಿಸುತ್ತದೆ ಎಂದು ಬಿಸಿಸಿಐ ದೃಢಪಡಿಸಿದೆ.
ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಗಿಲ್ ಲೆಗ್ ಸೈಡ್ನತ್ತ ಫೋರ್ ಬಾರಿಸಿದಾಗ ಕುತ್ತಿಗೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಹೊರ ನಡೆದಿದ್ದರು.
ಕುತ್ತಿಗೆ ಭಾಗದ ಸ್ನಾಯು ಸೆಳೆತದಿಂದಾಗಿ ಅವರು ತೊಂದರೆಗೆ ಸಿಲುಕಿದ್ದು, ಹೀಗಾಗಿ ಕೊಲ್ಕತ್ತಾದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿದ್ದು, ಮೂರನೇ ದಿನದಾಟದಲ್ಲಿ ಭಾರತ ತಂಡವನ್ನು ಉಪ ನಾಯಕ ರಿಷಭ್ ಪಂತ್ ಮುನ್ನಡೆಸಲಿದ್ದಾರೆ.
Advertisement