

ಚೆನ್ನೈ: ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಡಿಸೆಂಬರ್‌ನಲ್ಲಿ ನಿಗದಿಯಾಗಿದ್ದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮಹಿಳಾ ಕ್ರಿಕೆಟ್ ಸರಣಿಯನ್ನು ಮುಂದೂಡಲಾಗಿದೆ. ಮಾನವೀಯತೆ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ದೇಶದ ನ್ಯಾಯಮಂಡಳಿ ನ್ಯಾಯಾಲಯವು ಮರಣದಂಡನೆ ವಿಧಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಕಳೆದ ಆಗಸ್ಟ್ ಆರಂಭದಲ್ಲಿ, ಭಾರತವು ಪುರುಷರ ಉಭಯ ಸರಣಿ ಪಂದ್ಯವನ್ನು ಮುಂದಿನ ವರ್ಷ ಸೆಪ್ಟೆಂಬರ್ ಗೆ ಮುಂದೂಡಿತ್ತು.
ಭಾರತ ಮಹಿಳಾ ತಂಡದ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡ ವಿಶ್ವಕಪ್ ಗೆದ್ದ ನಂತರ ಈ ಪಂದ್ಯ ಮೊದಲನೆಯದಾಗುತ್ತಿತ್ತು. ಐಸಿಸಿ ಫ್ಯೂಚರ್ ಟೂರ್ಸ್ ಕಾರ್ಯಕ್ರಮದ ಪ್ರಕಾರ, ಬಾಂಗ್ಲಾದೇಶ ಮಹಿಳಾ ತಂಡವು ಡಿಸೆಂಬರ್‌ನಲ್ಲಿ ಭಾರತ ವಿರುದ್ಧದ ವೈಟ್-ಬಾಲ್ ಸರಣಿಗಾಗಿ ಭಾರತಕ್ಕೆ ಆಗಮಿಸಬೇಕಾಗಿತ್ತು.
ಬಾಂಗ್ಲಾದೇಶ ಸರಣಿಯನ್ನು ಮುಂದೂಡಲಾಗಿದೆ ಎಂದು ಬಿಸಿಸಿಐ ಮೂಲವೊಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದೆ. ಯಾವುದೇ ಅಧಿಕೃತ ಕಾರಣವನ್ನು ನೀಡಿಲ್ಲ. ಆದರೆ ಎರಡೂ ರಾಷ್ಟ್ರಗಳ ನಡುವಿನ ಉದ್ವಿಗ್ನ ರಾಜತಾಂತ್ರಿಕ ಸಂಬಂಧಗಳು ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ. ಕಳೆದ ವರ್ಷ ದೇಶದಿಂದ ಪಲಾಯನ ಮಾಡಿದ ನಂತರ ಭಾರತದಲ್ಲಿರುವ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಒತ್ತಾಯಿಸುತ್ತಿದೆ.
ಈ ವರ್ಷದ ಆಗಸ್ಟ್‌ನಲ್ಲಿ ಪುರುಷರ ಹಾಕಿ ಏಷ್ಯಾ ಕಪ್ ಮತ್ತು ಅಕ್ಟೋಬರ್‌ನಲ್ಲಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಸೇರಿದಂತೆ ಬಹು-ರಾಷ್ಟ್ರಗಳ ಕ್ರೀಡಾಕೂಟಗಳಿಗಾಗಿ ಬಾಂಗ್ಲಾದೇಶ ತಂಡಗಳು ಭಾರತಕ್ಕೆ ಭೇಟಿ ನೀಡಿದ್ದವು.
Advertisement