

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (KSCA) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನವೇ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಆದೇಶಿಸಿತ್ತು. ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ನಡೆದ ನಾಮಪತ್ರ ಪರಿಶೀಲನೆ ವೇಳೆ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ಅಸಿಂಧುಗೊಂಡಿದೆ.
Advertisement